Advertisement

ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ- ಬಸವರಾಜ ಬೊಮ್ಮಾಯಿ

09:45 AM Sep 28, 2022 | Team Udayavani |

ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಅವರು ಸೆ.28(ಬುಧವಾರ) ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಪಿ.ಎಫ್.ಐ ಸಂಘಟನೆಯ ಬಹಳಷ್ಟು ಜನ  ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ.  ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ.  ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧ ಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ  ಕೂಡ ಪಿ.ಎಫ್.ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next