Advertisement

‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

01:30 PM Oct 28, 2021 | Team Udayavani |

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಕ್ಷ ಕಂಠಗಳ ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ಹಾಡುಗಳಿಗೆ ಧ್ವನಿಗೂಡಿಸಿದರು. ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದರು.

Advertisement

ಇಲ್ಲಿಯ ಅಶೋಕನಗರದ ಕನ್ನಡ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ ‘ಮಾತಾಡ್ ಮಾತಾಡ್ ಕನ್ನಡ’ ಅಭಿಯಾನದಲ್ಲಿ ಭಾಗವಹಿಸಿ ‘ಜಯ ಭಾರತ ಜನನಿಯ ತನುಜಾತೆ, ‘ಬಾರಿಸು ಕನ್ನಡ ಡಿಂಡಿಮವ’, ‘ಜೋಗದ ಸೀರಿ ಬೆಳಕಿನಲ್ಲಿ ಮತ್ತು ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗೀತೆಗಳನ್ನು ಹಾಡಿದರು.

ಇದನ್ನೂ ಓದಿ:ಕರುನಾಡಿನಲ್ಲಿ ಮೊಳಗಿದ ‘ಲಕ್ಷ ಕಂಠ ಗಾಯನ’

ಮುಖ್ಯಮಂತ್ರಿ ಬಸವರಾಜ ಮಾತನಾಡಿ, ಒಂದು ವಾರ ನಡೆಯಲಿರುವ ‘ಮಾತಾಡ್ ಮಾತಾಡ್ ಕನ್ನಡ’ ಅಭಿಯಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ರಾಜ್ಯಕ್ಕೆ ದೇಶದಲ್ಲಿ ತನ್ನದೆಯಾದ ಇತಿಹಾಸವಿದ್ದು, ಪ್ರತಿಯೊಬ್ಬರು ಕನ್ನಡದಲ್ಲಿ ಮಾತನಾಡಿ, ಕನ್ನಡ ಓದಿ, ಬರೆದು ಭಾಷೆಯನ್ನು ಉಳಿಸಿ ಬೆಳೆಸಬೇಕಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next