Advertisement

ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಜೊತೆ ಮಾತುಕತೆ ನಡೆಸಿದ ಸಿಎಂ ಬೊಮ್ಮಾಯಿ

03:06 PM Mar 03, 2022 | Team Udayavani |

ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

Advertisement

ಖಾರ್ಕೀವ್ ದಿಂದ 30 ಕಿ‌ಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ. ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ ಎಂದು ವಿದ್ಯಾರ್ಥಿಗಳು ತಮ್ಮ ಪರಿಸ್ಥಿತಿಯನ್ನು ವಿವರಿಸಿದರು.

ಇದನ್ನೂ ಓದಿ:ಕಂಡವರ ಜೇಬು ಭರ್ತಿ ಮಾಡುವ ‘ನೀಟ್’ ದಂಧೆಗೆ ಚರಮಗೀತೆ ಹಾಡುತ್ತೇವೆ: ಎಚ್ ಡಿ ಕುಮಾರಸ್ವಾಮಿ

ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಿಎಂ ಬೊಮ್ಮಾಯಿ, ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಮಾತನಾಡುತ್ತೇನೆ. ನಿಮಗೆ ಎಲ್ಲಾ ರೀತಿಯ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ. ನಿಮ್ಮನ್ನು ಅಲ್ಲಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಗೋಪಾಲಯ್ಯ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next