Advertisement

ಕೃಷ್ಣಾ ಸಂತ್ರಸ್ತರ ಪುನರ್ವಸತಿ ಕೇಂದ್ರಗಳ ಅಭಿವೃದ್ಧಿಗೆ ನೂರು ಕೋಟಿ ಬಿಡುಗಡೆ: ಬೊಮ್ಮಾಯಿ

02:51 PM Aug 21, 2021 | Team Udayavani |

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಜೊತೆಗೆ ಸಂತ್ರಸ್ತರ ಪುನರ್ವಸತಿ ಕೇಂದ್ರಗಳ ಅಭಿವೃದ್ಧಿಗೆ ನೂರು ಕೋಟಿ ರೂ. ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಶನಿವಾರ ಆಲಮಟ್ಟಿ ಶಾಸ್ತ್ರೀ ಜಲಾಶಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಈ ಹಿಂದೆ ಪುನರ್ವಸತಿ ಕೇಂದ್ರಗಳ ಅಭಿವೃದ್ಧಿಗೆ 197 ಕೋಟಿ ರೂ. ಕೋಟಿ ರೂ. ಯೋಜನೆ ರೂಪಿಸಿ ಅನುದಾನ ಬಿಡುಗಡೆ ಮಾಡಲಾಗಿದೆ. ಇದೀಗ ಇನ್ನೂ ಒಂದು ನೂರು ಕೋಟಿ ರೂ. ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ರೌಡಿಸಂ ಮಟ್ಟ ಹಾಕಲು ಪೋಲಿಸರಿಗೆ ಸೂಚನೆ: ಆರಗ ಜ್ಞಾನೇಂದ್ರ

ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಶಾಸ್ತ್ರೀ ಜಲಾಶಯದಲ್ಲಿ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಬಾಗಿನ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಉಮೇಶ ಕತ್ತಿ, ಸಚಿವರಾದ ಮುರುಗೇಶ‌ ನಿರಾಣಿ, ಸಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎ.ಎಸ್.ಪಾಟೀಲ, ನಡಹಳ್ಳಿ, ಯಶವಂತರಾಯಗೌಡ ಪಾಟೀಲ, ಈರಣ್ಣ ಚರಂತಿಮಠ, ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ, ವಿಜಯಪುರ ಜಿಲ್ಲಾಧಿಕಾರಿ ಸುನಿಲ ಕುಮಾರ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರನ್ ಸೇರಿದಂತೆ ಇತರೆ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next