Advertisement

ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಆಲ್ ದಿ ಬೆಸ್ಟ್ ಹೇಳಿದ ಸಿಎಂ ಬೊಮ್ಮಾಯಿ

08:39 AM Mar 28, 2022 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗುತ್ತಿದೆ. ಮಾ.28ರಿಂದ ಎ.11ರವರೆಗೆ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ನಡೆಯಲಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಲ್‌ ದಿ ಬೆಸ್ಟ್ ಹೇಳಿದರು.

Advertisement

ಎಸ್ಎಸ್ಎಲ್ ಸಿ ಪರೀಕ್ಷೆ ಎಲ್ಲಾ ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಪ್ರಮುಖವಾದದ್ದು. ಎಲ್ಲಾ ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಮುಂದೆ ಅವರ ಭವಿಷ್ಯವನ್ನು ಉತ್ತಮ‌ ರೀತಿಯಲ್ಲಿ ರಚಿಸಿಕೊಳ್ಳಬೇಕು ಎನ್ನುವುದು ನಮ್ಮ ಆಸೆ. ಎಲ್ಲಾ ಮಕ್ಕಳಿಗೂ ಆಲ್ ದಿ ಬೆಸ್ಟ್ ಎಂದು ಸಿಎಂ ಹೇಳಿದರು.

ಗೋವಾಕ್ಕೆ ತೆರಳಿದ ಸಿಎಂ : ಪ್ರಮೋದ್ ಸಾವಂತ್ ಅವರು ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾವಂತ್ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ:ಯೋಧರಿಗೆ ವರ್ಷಕ್ಕೆ 100 ರಜೆ!? ಪ್ರಸ್ತಾವನೆಯಾಗಿ ರೂಪು ತಳೆಯಲಿದೆ ಅಮಿತ್‌ ಶಾ ಪರಿಕಲ್ಪನೆ

ಹೆಚ್ ಎಲ್‌ನಿಂದ ವಿಶೇಷ ವಿಮಾನ ಮೂಲಕ ಗೋವಾಕ್ಕೆ ಸಿಎಂ ಹೊರಟರು. ಪ್ರಮಾಣ ವಚನ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಸಮವಸ್ತ್ರ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಿಎಂ ತೆರಳಿದರು.

ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ: ಸುಮಾರು 8.74 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿಯೊಬ್ಬರಿಗೂ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಹಿಜಾಬ್‌ ವಿಚಾರ ಮುಂದಿಟ್ಟು ಕೊಂಡು ಒಂದು ವೇಳೆ ಯಾರಾದರೂ ಬಹಿಷ್ಕರಿಸಿದರೆ, ಅಂಥವರಿಗೆ ಮತ್ತೂಮ್ಮೆ ಪರೀಕ್ಷೆ ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ರವಿವಾರ ಸ್ಪಷ್ಟಪಡಿಸಿದ್ದಾರೆ. ಪರೀಕ್ಷೆ ಬರೆಯಲು 3,444 ಪರೀಕ್ಷೆ ಕೇಂದ್ರ ಸ್ಥಾಪಿಸಲಾಗಿದೆ. 48 ಸಾವಿರ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಪರೀಕ್ಷೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಇರಲಿದೆ. ಹಿಜಾಬ್‌ ಧರಿಸುವವರು, ಶಾಲಾ ಆವರಣದವರೆಗೆ ಮಾತ್ರ ಹಾಕಿಕೊಂಡು ಬರಬಹುದು. ಪರೀಕ್ಷೆ ಕೊಠಡಿಯೊಳಗೆ ಸಮವಸ್ತ್ರದಲ್ಲೇ ಇರಬೇಕು. ಎಸ್ಸೆಸ್ಸೆಲ್ಸಿ ಮಕ್ಕಳು ಯಾವುದೇ ಭಯವಿಲ್ಲದೇ ಪರೀಕ್ಷೆ ಎದುರಿಸಬೇಕು. ಕೊರೊನಾ ಹಿನ್ನೆಲೆಯಲ್ಲಿ ಶೇ.80 ಪಠ್ಯಕ್ರಮ ಪೂರ್ಣಗೊಂಡಿದ್ದು, ಅದೇ ಪಠ್ಯಕ್ರಮ ಅನುಸಾರವಾಗಿ ಪ್ರಶ್ನೆ ಪತ್ರಿಕೆ ಇರಲಿವೆ. ಈ ಬಾರಿ ಆಯ್ಕೆ ಪ್ರಶ್ನೆಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಹೀಗಾಗಿ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಸಮವಸ್ತ್ರ ನಿಗದಿಯಾಗಿದೆ. ಆಯಾ ಖಾಸಗಿ ಶಾಲೆಗಳಲ್ಲಿ ನಿಗದಿಪಡಿಸಿದ ಸಮವಸ್ತ್ರ ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆಗೆ ಬರಬೇಕು. ಬಾಹ್ಯ ಮತ್ತು ರಿಪಿಟರ್ ವಿದ್ಯಾರ್ಥಿ ಗಳಿಗೆ ಇದು ಅನ್ವಯಿಸಲ್ಲ. ರೆಗ್ಯೂಲರ್‌ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಂಹಿತೆ ಅನ್ವಯಿಸಲಿದೆ ಎಂದರು

Advertisement

Udayavani is now on Telegram. Click here to join our channel and stay updated with the latest news.

Next