Advertisement

ಪುಣ್ಯಕ್ಷೇತ್ರಗಳಿಂದ ಬರುತ್ತಿದ್ದರು…; 9 ಜೀವ ಬಲಿಪಡೆದ ಅಪಘಾತ!: ಬೊಮ್ಮಾಯಿ, ಎಚ್ಡಿಕೆ ಸಂತಾಪ

09:56 AM Oct 16, 2022 | Team Udayavani |

ಬೆಂಗಳೂರು: ಹಾಸನ ಜಿಲ್ಲೆ ಅರಸೀಕೆರೆ ಸಮೀಪದ ಬಾಣಾವರ ಬಳಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ದಾರುಣ ಅಂತ್ಯ ಕಂಡಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ದುಃಖ ವ್ಯಕ್ತಪಡಿಸಿದ್ದಾರೆ.

Advertisement

ಶನಿವಾರ ತಡರಾತ್ರಿ ಬಾಣವರ ಹಾಲಿನ ಟ್ಯಾಂಕರ್‌, ಟಿಟಿ ವಾಹನ, ಕೆಎಸ್‌ ಆರ್‌ ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮಕ್ಕಳೂ ಸೇರಿ 9 ಜನರು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಧರ್ಮಸ್ಥಳ ಸೇರಿ ಕೆಲ ಪುಣ್ಯಕ್ಷೇತ್ರಗಳಿಗೆ ತೆರಳಿ ದೇವರ ದರ್ಶನ ಪಡೆದು ತಮ್ಮ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದರು. ಗ್ರಾಮಕ್ಕೆ ಕೆಲವೇ ಕಿಮೀ ದೂರದಲ್ಲಿ ಈ ಅಪಘಾತವಾಗಿದೆ.

ಟಿಟಿ ವಾಹನದಲ್ಲಿದ್ದ ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಮೃತ ದುರ್ದೈವಿಗಳು.

ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿ, ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತರಾಗಿರುವುದು ತೀವ್ರ ದುಃಖದಾಯಕ. ಮೃತರ ಆತ್ಮಗಳಿಗೆ ಶಾಂತಿಯನ್ನು ಕೋರುತ್ತೇನೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು ಮತ್ತು ಗಾಯಾಳುಗಳ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.

Advertisement

ಮಾಜಿ ಸಿಎಂ ಎಚ್ ಡಿಕೆ ಅವರು ಟ್ವೀಟ್ ಮಾಡಿ, ಜಿಲ್ಲಾಧಿಕಾರಿಗಳು ಆಸ್ಪತ್ರೆಯಲ್ಲಿರುವ ಮೃತದೇಹಗಳ ಮರಣೋತ್ತರ ಪರೀಕ್ಷೆ ಮುಗಿಸಲು ಕ್ರಮ ವಹಿಸಿ, ತಕ್ಷಣ ಸಂಬಂಧಿಕರಿಗೆ ಹಸ್ತಾಂತರ ಮಾಡಬೇಕು. ಗಾಯಾಳುಗಳಿಗೆ ಉಚಿತ, ಉತ್ತಮ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರಿಗೆ ರಾಜ್ಯ ಸರಕಾರ ಕೂಡಲೇ ಸೂಕ್ತ ಪರಿಹಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ಕರುಣಿಸಲಿ ಹಾಗೂ ಗಾಯಾಳುಗಳೆಲ್ಲರೂ ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್ ಡಿಕೆ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next