Advertisement

ಮಡಿಕೇರಿ: ಮಳೆ ಹಾನಿ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ; ಪರಿಹಾರ ವಿತರಣೆ

12:48 PM Jul 12, 2022 | Team Udayavani |

ಮಡಿಕೇರಿ: ಮಳೆಯಿಂದ ತತ್ತರಿಸಿದ ಮಡಿಕೇರಿಯ ಮಳೆ ಹಾನಿ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೇಟಿ ನೀಡಿದರು.

Advertisement

ಕಳೆದ 12 ದಿನಗಳಿಂದ ಧಾರಾಕಾರವಾಗಿ‌ ಸುರಿದ ಮಳೆಗೆ ಮನೆ ಕಳೆದುಕೊಂಡ ಮಡಿಕೇರಿಯ ಮಲ್ಲಿಕಾರ್ಜುನ ನಗರದ ಗೋಪಾಲ ಅವರ ಮನೆಯನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವೀಕ್ಷಿಸಿದರು.

ಬಳಿಕ ಗೋಪಾಲ ಕುಟುಂಬದವರಿಗೆ  95,100 ರೂ. ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಕಂದಾಯ ಸಚಿವರಾದ ಆರ್.ಅಶೋಕ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next