ಕುಣಿಗಲ್: ತಾಲೂಕಿನ ಇತಿಹಾಸ ಧಾರ್ಮಿಕ ಪ್ರಸಿದ್ಧ ಎಡಿಯೂರು ಸಿದ್ದಲಿಂಗ ಸ್ವಾಮಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಪೂಜೆ ಸಲ್ಲಿಸಿದರು.
Advertisement
ಮಂಗಳವಾರ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಂತರಾಷ್ಟ್ರೀಯ ಯೋಗ ದಿನ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮೈಸೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುವಾಗ ಇಲ್ಲಿನ ಎಡಿಯೂರು ಸ್ವಾಮಿ ಕ್ಷೇತ್ರಕ್ಕೆ ಭೇಟಿ ಸಿದ್ದಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರು.
ಈ ವೇಳೆ ಬಾಳೇ ಹೊನ್ನೂರು ಶಾಖಾ ಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಆರೋಗ್ಯ ಸಚಿವ ಡಾ.ಸುಧಾಕರ್, ಶಾಸಕ ಡಾ.ಹೆಚ್.ಡಿ.ರಂಗನಾಥ್, ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್, ಎಸ್ಪಿ ರಾಹುಲ್ ಕುಮಾರ್ ಇದ್ದರು.