Advertisement

ಇಂದು ಕಾಫಿನಾಡಿಗೆ ಸಿಎಂ ಬೊಮ್ಮಾಯಿ ಪಯಣ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ  

08:53 AM Jan 18, 2023 | Team Udayavani |

ಚಿಕ್ಕಮಗಳೂರು : ಇಂದು ಕಾಫಿನಾಡು ಚಿಕ್ಕಮಗಳೂರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಚಿಕ್ಕಮಗಳೂರು ಹಬ್ಬದಲ್ಲಿ ಭಾಗಿಯಾಗಲಿದ್ದಾರೆ.

Advertisement

ಬೆಳಗ್ಗೆ 11ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೀರೂರಿಗೆ ಆಗಮಿಸಿ, ಆ ಬಳಿಕ ಬೀರೂರಿನಲ್ಲಿ ನಡೆಯಲಿರುವ ಶಾಸಕ ಬೆಳ್ಳಿ ಪ್ರಕಾಶ್ ಮಗಳ ಮದುವೆಯಲ್ಲಿ ಭಾಗಿಯಾಗಲಿದ್ದಾರೆ.

ಮಧ್ಯಾಹ್ನ ಚಿಕ್ಕಮಗಳೂರು ನಗರಕ್ಕೆ ಆಗಮಿಸಲಿರುವ ಸಿಎಂ 3.30ಕ್ಕೆ ಚಿಕ್ಕಮಗಳೂರು ಹಬ್ಬದ ಉತ್ಸವದ ಮೆರವಣಿಗೆಯನ್ನು ವೀಕ್ಷಿಸಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ.

ಈ ವೇಳೆ ಕೃಷಿ ಮೇಳೆ ಸೇರಿದಂತೆ ವಿವಿಧ ಮೇಳಕ್ಕೆ ಚಾಲನೆ‌‌‌ಯನ್ನು ನೀಡಲಿದ್ದಾರೆ. ಸಂಜೆ 6ಕ್ಕೆ ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿರುವ ಚಂದ್ರದ್ರೋಣ ವೇದಿಕೆಯಲ್ಲಿ ಚಿಕ್ಕಮಗಳೂರು ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದ ನಂತರ ಬೆಂಗಳೂರು ತೆರಳಲಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next