Advertisement

ಬೆಂಗಳೂರು ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ

11:35 AM Oct 18, 2021 | Team Udayavani |

ಬೆಂಗಳೂರು: ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ಭೇಟಿ ನೀಡಿ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲಿಸಿದರು.

Advertisement

ಬೆಂಗಳೂರಿನ ಆಕ್ಸ್ಫರ್ಡ್ ಇಂಜಿನಿಯರಿಂಗ್ ಕಾಲೇಜ್ ಎದುರುಗಡೆಯ ಬೃಹತ್ ಮಳೆನೀರು ಚರಂಡಿಯ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಕಾಮಗಾರಿಯನ್ನು ಸಮರ್ಪಕವಾಗಿ ಹಾಗೂ ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ಎಚ್.ಎಸ್.ಆರ್ ಬಡಾವಣೆಯ BWSSB ಸೀವೇಜ್ ಟ್ರೀಟ್ಮೆಂಟ್ ಪ್ಲಾಂಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಜೆ.ಎಸ್.ಎಸ್ ಜಂಕ್ಷನ್ ನಲ್ಲಿನ ಬೃಹತ್ ಚರಂಡಿಯ ಕಾಮಗಾರಿ ವೀಕ್ಷಣೆ ಮಾಡಿದರು.

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಮತ್ತಿತರ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next