Advertisement

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

01:23 PM Feb 01, 2023 | Team Udayavani |

ಹಾವೇರಿ: ಭದ್ರಾ ಮೇಲ್ದಂಡೆ ಯೋಜನೆಗೆ ಈ ಬಾರಿ ಕೇಂದ್ರ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಮಾಡಿದ್ದು ಸ್ವಾಗತಾರ್ಹ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಬ್ಯಾಡಗಿ ತಾಲೂಕು ಶಿಡೇನೂರು ಗ್ರಾಮದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರಮುಖ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡಿದ್ದಾರೆ. ಬರಗಾಲ ಪೀಡಿತ ಬಿಸಿಲು ಪ್ರದೇಶದ ನಾಡಿಗೆ ನೀರಾವರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ ಪ್ರಸ್ತಾವನೆ ಕಳಿಸಿದ್ದೆವು. ಈ ಯೋಜನೆ ಬಹಳ ಪ್ರಮುಖವಾಗಿದೆ. ಇಷ್ಟು ದೊಡ್ಡ ಪ್ರಮಾಣದ ಅನುವಾದ ಘೋಷಣೆ ಮಾಡಿದ್ದು ಸಂತಸದ ಸಂಗತಿ ಎಂದರು.

ಇದನ್ನೂ ಓದಿ:Union Budget 2023: ಆದಾಯ ತೆರಿಗೆಯಲ್ಲಿ ಭಾರಿ ಬದಲಾವಣೆ; 7 ಲಕ್ಷದವರೆಗೆ ಟ್ಯಾಕ್ಸ್ ಕಟ್ಟಬೇಕಿಲ್ಲ

Advertisement

ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್ ಭೂ ಸ್ವಾದೀನಕ್ಕೆ ರೈತರ ವಿರೋಧ ಕುರಿತು ಪ್ರತಿಕ್ರಿಯಿಸಿದ ಅವರು, ಫಲವತ್ತಾದ ಭೂಮಿ ಇರೋ ಕಾರಣ ರೈತರು ವಿರೋಧ ಮಾಡಿದ್ದಾರೆ. ಎಲ್ಲಿ ಫಲವತ್ತಾದ ಭೂಮಿ ಇರುತ್ತೆ ಅದನ್ನು ತೆಗೆದುಕೊಳ್ಳದೆ, ಬಂಜರು ಭೂಮಿ ತೆಗೊಂಡು ಕೈಗಾರಿಕಾ ಕಾರಿಡಾರ್ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇವೆ. ಅದಕ್ಕಾಗಿಯೇ ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್ ಗೆ ಭೂ ಸ್ವಾಧೀನ ಪ್ರಕ್ರಿಯೆ ಆದೇಶ ಹಿಂಪಡೆದಿದ್ದೇವೆ. ಹಾವೇರಿ ಜಿಲ್ಲೆಯಲ್ಲಿ ಬೇರೆ ಕಡೆ ಎಲ್ಲಿ ಕಾರಿಡಾರ್ ಮಾಡಬೇಕು ಈ ಬಗ್ಗೆ ಜಮೀನು ಹುಡುಕಲು ಡಿಸಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next