Advertisement

ಜಿಲ್ಲಾ ಪಂಚಾಯತ್‌ ಚುನಾವಣೆ ಸದ್ಯದಲ್ಲೇ ಘೋಷಣೆ?

11:18 AM May 12, 2022 | Team Udayavani |

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ತೀರ್ಪು ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಅಡ್ವಕೇಟ್‌(ಎಜಿ) ಜನರಲ್‌ ಪ್ರಭುಲಿಂಗ ನಾವದಗಿ ಅವರಿಂದ ಕಾನೂನು ಸಲಹೆ ಪಡೆದಿದ್ದಾರೆ.

Advertisement

ರಾಜ್ಯದಲ್ಲಿ ಬಿಬಿಎಂಪಿ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ಗಳು ಸೇರಿದಂತೆ ಚುನಾವಣೆ ಬಾಕಿ ಇರುವ ಸ್ಥಳೀಯ ಸಂಸ್ಥೆಗಳಿಗೆ ಸದ್ಯದಲ್ಲೇ ಚುನಾವಣೆ ನಡೆಯುವ ನಿರೀಕ್ಷೆ ಇದೆ.

ಮಂಗಳವಾರ ಮಧ್ಯಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ವೇಳೆ ಇದು ಎಲ್ಲಾ ರಾಜ್ಯಗಳಿಗೂ ಅನ್ವಯವಾಗಲಿದೆ ಎಂದು ಸುಪ್ರೀಂ ಕೊರ್ಟ್‌ ಹೇಳಿತ್ತು. ಇದೇ ಕಾರಣಕ್ಕೆ ದೆಹಲಿಯಿಂದ ವಾಪಸ್ಸಾಗುತ್ತಿದ್ದಂತೆ ಸಿಎಂ ಬೊಮ್ಮಾಯಿ ಇಂದು ಸುಪ್ರೀಂ ಕೋರ್ಟ್‌ ತೀರ್ಪು ಸಂಬಂಧಿಸಿದಂತೆ ಎಜಿ ಅವರ ಸಲಹೆ ಪಡೆದಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸುತ್ತೇವೆ. ಸುಪ್ರೀಂ ಕೋರ್ಟ್ ನ ಎರಡೂ ತೀರ್ಪುಗಳ ಬಗ್ಗೆಯೂ ಚರ್ಚಿಸುತ್ತೇವೆ. ಒಬಿಸಿ ಮೀಸಲಾತಿ ಇಟ್ಟುಕೊಂಡೇ ಚುನಾವಣೆ ಮಾಡಬೇಕು. ಸುಪ್ರೀಂ ಕೋರ್ಟ್‌ನ ಎರಡು ತೀರ್ಪಿನ ಬಗ್ಗೆ ವಿಶ್ಲೇಷಣೆ ಮಾಡುತ್ತೇವೆ ಎಂದರು.

ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಂಬಂಧ ಈಗಾಗಲೇ ಸಮಿತಿ ಕೂಡ ನೇಮಿಸಿದ್ದೇವೆ. ಅದರ ಬಗ್ಗೆಯೂ ಹಾಗೂ ವಿಪಕ್ಷ ನಾಯಕರ ಪತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ಮುಂದೆ ಯಾವ ನಿಲುವನ್ನು ತೆಗೆದುಕೊಳ್ಳಬೇಕು ಎಂದು ಕಾನೂನು ತಜ್ಞರ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಇದುವರೆಗಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸಂವಿಧಾನದ ಪ್ರಕಾರವೇ ಓಬಿಸಿಯವರಿಗೆ ಪ್ರಾತಿನಿಧ್ಯ ಕೊಡುತ್ತಾ ಬಂದಿದ್ದೇವೆ. ಈಗ ಒಬಿಸಿ ಇಟ್ಟುಕೊಂಡೇ ಚುನಾವಣೆ ಮಾಡಬೇಕೆಂಬುದು ನಮ್ಮ ಉದ್ದೇಶ ಆಗಿದೆ. ಹೀಗಾಗಿ ಒಬಿಸಿ ಇಟ್ಟುಕೊಂಡು ಯಾವ ರೀತಿ ಚುನಾವಣಾ ಪ್ರಕ್ರಿಯೆ ಮಾಡಬಹುದು ಎಂಬುದರ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು.

Advertisement

ಇದನ್ನೂ ಓದಿ:ಸುಳಿವು ಸಿಗದ ಆಸಿಡ್‌ ದಾಳಿಕೋರ: ಹಿಂದೆಯೂ ಪ್ರೀತಿಸುವಂತೆ ಯುವತಿಯೊಬ್ಬಳ ಹಿಂದೆ ಬಿದ್ದಿದ್ದ

ಮಧ್ಯಪ್ರದೇಶ ಪುನರ್ ಪರಿಶೀಲನೆ ಅರ್ಜಿ ಬಗ್ಗೆಯೂ ಚರ್ಚಿಸಲಾಗುವುದು. ಇದರಲ್ಲಿ ಬಹಳಷ್ಟು ವಿಷಯಗಳು ಇವೆ. ಒಟ್ಟಾರೆ ಚುನಾವಣೆ ಹಾಗೂ ಒಬಿಸಿ ಮೀಸಲಾತಿ ಆಗುವುದಕ್ಕೆ ಏನೆಲ್ಲ ಕ್ರಮಗಳನ್ನು, ಪ್ರಯತ್ನಗಳನ್ನು ಮಾಡಬೇಕೋ ಅದೆಲ್ಲವನ್ನೂ ಕಾನೂನಾತ್ಮಕವಾಗಿ ಮಾಡುತ್ತೇವೆ ಎಂದರು.

ಮತಾಂತರ ನಿಷೇಧ ಕಾಯಿದೆ ಜಾರಿ ವಿಚಾರ ಕುರಿತು ಮಾತನಾಡಿ, ಸುಗ್ರೀವಾಜ್ಞೆ ಮೂಲಕ ಬಿಲ್ ಜಾರಿ ಬಗ್ಗೆ ಇಂದಿನ ಸಂಪುಟದಲ್ಲಿ ನಿರ್ಣಯ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next