ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವಿವಾರ ಹೊಸದಿಲ್ಲಿಗೆ ತೆರಳಲಿದ್ದಾರೆ. ಸದ್ಯ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸಿ.ಡಿ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂಬ ವದಂತಿ ಹರಡಿದೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಅವರು ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದಾರೆ. ಬಳಿಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗುವುದಕ್ಕೆ ಸಮಯ ಕೋರಿದ್ದಾರೆ. ಅಮಿತ್ ಶಾ ಭೇಟಿ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಇತ್ತೀಚೆಗಷ್ಟೇ ರಮೇಶ್ ಜಾರಕಿಹೊಳಿ ಅವರು ಶಾ ಅವರನ್ನು ಭೇಟಿ ಮಾಡಿ ಸಿ.ಡಿ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಮನವಿ ಮಾಡಿದ್ದರು.