ಬೆಂಗಳೂರು: ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರ್ ನಿವಾಸಕ್ಕೆ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 3.30 ರ ವಿಮಾನದಲ್ಲಿ ಮಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.
ಪ್ರವೀಣ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಬಂಧಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಹಿಂದೆ ಇರುವ ಶಕ್ತಿಗಳನ್ನು ದಮನ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ. ಇದರ ಹಿಂದೆ ಪಿಎಫ್ಐ ಸಂಘಟನೆ ಕೈವಾಡವಿದೆ. ಇದನ್ನು ಬ್ಯಾನ್ ಮಾಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು ಎಂದರು.
ಇದನ್ನೂ ಓದಿ:ನೇಮಕಾತಿ ಹಗರಣ: ಪಕ್ಷದ ಎಲ್ಲಾ ಹುದ್ದೆಯಿಂದ ಪಾರ್ಥ ಚಟರ್ಜಿಯನ್ನು ಉಚ್ಛಾಟಿಸಿ: ಟಿಎಂಸಿ ವಕ್ತಾರ
ಇತ್ತೀಚಿನ ಘಟನೆಗಳಿಗಾಗಿ ಕಠೋರ ಕಾನೂನು ಅನಿವಾರ್ಯವಾಗಿದೆ ಈ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಮಹತ್ವದ ನಿರ್ಧಾರ ಮಾಡಲಿದೆ. ಕಠೋರವಾದ ಕಾನೂನು ರಾಜ್ಯದಲ್ಲಿ ಅವಶ್ಯಕವಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.