Advertisement

ವಿಪಕ್ಷ ಪ್ರಧಾನಿ ಭೇಟಿ ಮಾಡಲಿ: ಸಿಎಂ 

11:38 PM Aug 22, 2021 | Team Udayavani |

ಹುಬ್ಬಳ್ಳಿ: ಜಾತಿಗಣತಿ ವಿಷಯ ಕುರಿತು ವಿಪಕ್ಷಗಳು ಪ್ರಧಾನಿಯವರನ್ನು ಭೇಟಿಯಾಗಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ನಗರದ ತಮ್ಮ ನಿವಾಸದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವಿಷಯ ನ್ಯಾಯಾಲಯದಲ್ಲಿದೆ. ಈ ಕುರಿತು ಪ್ರಧಾನಿಗಳನ್ನು ಭೇಟಿಯಾಗಲು ವಿಪಕ್ಷಗಳ ಮುಖಂಡರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ ಎಂದರು.

ಯತ್ನಾಳ್‌ ಹೇಳಿಕೆಗೆ ಪ್ರತಿಕ್ರಿಯೆ ಇಲ್ಲ :

ಗಣೇಶ ಚತುರ್ಥಿ ಆಚರಣೆ ಕುರಿತು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ. ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏನೂ ಹೇಳುವುದಿಲ್ಲ ಎಂದರು.

ರಕ್ಷಾ ಬಂಧನ :  ಇದೇ ವೇಳೆ ಮುಖ್ಯಮಂತ್ರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ರಕ್ಷಾ ಬಂಧನ ಹಿನ್ನೆಲೆಯಲ್ಲಿ  ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಸಹೋದರಿಯರು ರಾಖೀ ಕಟ್ಟಿ ಹಬ್ಬದ ಶುಭಾಶಯ ಹೇಳಿದರು.

Advertisement

ಗೃಹ ಪ್ರವೇಶದಲ್ಲಿ ಭಾಗಿ :

ಅನಂತರ  ಬೊಮ್ಮಾಯಿಯವರು ಈರಪ್ಪ ಕಾಡಪ್ಪ ನವರ ಕುಟುಂಬದವರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ವಿಮಾನ ನಿಲ್ದಾಣಕ್ಕೆ ತೆರಳಿ ಹಂಪಿ ಯಿಂದ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸ್ವಾಗತಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಷಿಯವರ ಸಹೋದರನ ಪುತ್ರನ ವಿವಾಹದಲ್ಲಿ ಪಾಲ್ಗೊಂಡು ಬೆಂಗಳೂರಿಗೆ ನಿರ್ಗಮಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next