Advertisement

ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್​ ಆ್ಯಂಟಿಜನ್ ಟೆಸ್ಟ್ ನೆಗೆಟಿವ್

09:30 PM Aug 10, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್‌ ವರದಿ ನೆಗೆಟಿವ್‌ ಬಂದಿದೆ.

Advertisement

ಕಳೆದ ಐದು ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದ ಅವರಿಗೆ ಮಂಗಳವಾರ ಕೋವಿಡ್‌ ಆ್ಯಂಟಿಜನ್‌ ಟೆಸ್ಟ್‌ ಮಾಡಲಾಗಿತ್ತು. ಅದರ ವರದಿ ನೆಗೆಟಿವ್‌ ಬಂದಿದೆ.

ವರದಿ ನೆಗೆಟಿವ್‌ ಬಂದಿರುವುದರಿಂದ ಮುಖ್ಯಮಂತ್ರಿ ಮತ್ತೆ ಗುರುವಾರದಿಂದ ಭೌತಿಕವಾಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಗುರುವಾರ ಮೈಸೂರು ಮತ್ತು ಮಂಡ್ಯ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next