Advertisement

ಕುದ್ರೋಳಿಗೆ ಸಿಎಂ ಬೊಮ್ಮಾಯಿ ಭೇಟಿ; 3 – 7 ಗಂಟೆವರೆಗೆ ಭಕ್ತರ ಭೇಟಿಗೆ ಅವಕಾಶವಿಲ್ಲ

05:12 PM Oct 12, 2021 | Team Udayavani |

ಮಂಗಳೂರು:- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ(ಅ.13) ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯವಾದ ಕುದ್ರೋಳಿ ಗೋಕರ್ಣಾಥೇಶ್ವರ ದೇಗುಲಕ್ಕೆ ಬೇಟಿ ನೀಡಲಿದ್ದಾರೆ.

Advertisement

ಈ ಹಿನ್ನೆಲೆಯಲ್ಲಿ ಎಲ್ಲಾ ಭಕ್ತಾದಿಗಳು ನಾಳೆ ಸಂಜೆ 3 ಗಂಟೆಯಿಂದ 7 ಗಂಟೆಯ ವರೆಗೆ ಕುದ್ರೋಳಿ ದೇವಾಲಯ ಮತ್ತು ಉಡುಪಿ ಜಿಲ್ಲಾ ರಸ್ತೆ, ಉಡುಪಿ – ಮಂಗಳೂರು ಮತ್ತು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ತೆರಳುವ ಎಲ್ಲಾ ರಸ್ತೆಗಳಲ್ಲಿ ಅನಗತ್ಯವಾಗಿ ಸಂಚರಿಸದಂತೆ ಮನವಿ ಮಾಡಲಾಗಿದೆ. ದೇವಾಲಯದಲ್ಲೂ ಭಕ್ತರು ಕೋವಿಡ್‌ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮಂಗಳೂರು ಪೋಲಿಸರು ಸೂಚಿಸಿದ್ದಾರೆ.

ಇದನ್ನೂ ಓದಿ:- ರಾಷ್ಟ್ರ ರಾಜಕಾರಣದಲ್ಲೇ ಮುಂದುವರೆಯುವೆ : ಸಂಸದ ಬಿ.ವೈ.ರಾಘವೇಂದ್ರ

ಸಿಎಂ ಉಡುಪಿ ಜಿಲ್ಲೆಯಲ್ಲಿ ಪ್ರವಾಸಗೈಯಲಿದ್ದು ವಿವಿಧೆಡೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11ಕ್ಕೆ ಅದಮಾರಿನಲ್ಲಿ ಪೂರ್ಣಪ್ರಜ್ಞ ಪದವಿ ಕಾಲೇಜು ಕಟ್ಟಡದ ಶಂಕುಸ್ಥಾಪನೆ, ಮಧ್ಯಾಹ್ನ 12.30ಕ್ಕೆ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ, 1ಕ್ಕೆ ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನ್ಯೂ ಸೈನ್ಸ್‌ ಬ್ಲಾಕ್‌ ಕಟ್ಟಡದ ಶಂಕುಸ್ಥಾಪನೆ ಮತ್ತು ಕಂಪ್ಯೂಟರ್‌ ಸೈನ್ಸ್‌ ಲ್ಯಾಬೋರೇಟರಿ ಉದ್ಘಾಟನೆ, 2.30ಕ್ಕೆ ಕುಂತಳನಗರದಲ್ಲಿ ಸಮುದಾಯ ಭವನ ಮತ್ತು ಕೌಶಲಾಭಿವೃದ್ಧಿ ಕೇಂದ್ರ ಉದ್ಘಾಟನೆ ಹಾಗೂ ಲೋಕೋಪಯೋಗಿ ಇಲಾಖೆ ವತಿಯಿಂದ ನಡೆಯುವ ರಸ್ತೆ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next