ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ನಿವೇಶನ ಮಂಜೂರು ಮಾಡಿದರು.
ಕೆಲ ದಿನಗಳ ಹಿಂದಷ್ಟೇ ಸಿಎಂ ಅವರನ್ನು ತಿಮ್ಮಕ್ಕ ಭೇಟಿ ಮಾಡಿದ್ದರು. ಸಿಎಂ ಸೂಚನೆ ಮೇರೆಗೆ ನಿವೇಶನ ಹಂಚಿಕೆ ಪತ್ರವನ್ನು ಬಿಡಿಎ ತಿಮ್ಮಕ್ಕನಿಗೆ ನೀಡಿತ್ತು.
ಇಂದು ಮುಂಜಾನೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಪುತ್ರನಿಗೆ ಸಿಎಂ ಬಸವರಾಜ ಬೊಮ್ಮಾಯಿ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದರು.
ಇದನ್ನೂ ಓದಿ:ಅನ್ಯಪಕ್ಷ ಅಧಿಕಾರದಲ್ಲಿರುವುದು ಬಿಜೆಪಿಗೆ ಅಪಥ್ಯ: ವಾರ್ಡ್ ವಿಂಗಡಣೆ ವಿರುದ್ಧ ಎಚ್ ಡಿಕೆ ಗರಂ
Related Articles
ನಾಡಪ್ರಭು ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ಜೆ ಸೆಕ್ಟರ್ ನಲ್ಲಿ ಒಟ್ಟು 50*80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ.
Advertisement– CM of Karnataka (@CMOKarnataka) 25 June 2022