Advertisement
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ಸೋಮವಾರ ಪೂರ್ವ ಸಿದ್ಧತೆಗಾಗಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಹತ್ತು ಇಲಾಖೆಗಳ ವ್ಯಾಪ್ತಿಯ ಶಿಗ್ಗಾವಿ-ಸವಣೂರು ತಾಲೂಕು ವ್ಯಾಪ್ತಿಯ ಒಂಭತ್ತು ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಏಳುಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ಸೆ.1ರಂದು ಶಿಗ್ಗಾವಿ ತಾಲೂಕು ತಡಸ, ಕಲಕಟ್ಟಿ-ರಾಜೀವ ಗ್ರಾಮ, ಬಾಡ, ಬಂಕಾಪುರ, ಮಣ್ಣೂರ, ಸವಣೂರ ಪಟ್ಟಣ, ಶಿಗ್ಗಾವಿ ಪಟ್ಟಣದಲ್ಲಿ ಆಯೋಜಿತವಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
Related Articles
Advertisement
ಬಂಕಾಪುರಕ್ಕೆ ಆಗಮಿಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾದಿಮಹಲ್ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ, ಕಾರವಾರ-ಇಳಕಲ್ಲ ರಸ್ತೆ ಸುಧಾರಣೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ ಸವಣೂರಿನ ಎಪಿಎಂಸಿ ಹತ್ತಿರ ಲೋಕೋಪಯೋಗಿ ಇಲಾಖೆಯ ಕಾರವಾರ-ಇಳಕಲ್ಲ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ದೊಡ್ಡಹುಣಸೆ ಕಲ್ಮಠದ ಶ್ರೀ ಚನ್ನಬಸವೇಶ್ವರ ಮಂಗಲ ಭವನ ಹಾಗೂ ಕೆಸಿಸಿ ಬ್ಯಾಂಕ್ ಉದ್ಘಾಟಿಸಲಿದ್ದಾರೆ ಎಂದರು.
ನಂತರ ಶಿಗ್ಗಾವಿಗೆ ಆಗಮಿಸಿ ನೂತನಪ್ರವಾಸಿಮಂದಿರ ಕಟ್ಟಡ, ಪೊಲೀಸ್ ಇನ್ಸ್‌ಪೆಕrರ್ , ಡಿವೈಎಸ್ಪಿ ಕಟ್ಟಡ, ಹಳೇ ಬಸ್ ನಿಲ್ದಾಣದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಶಿಗ್ಗಾವಿ ನೂತನ ಪುರಸಭೆ ಕಟ್ಟಡ, ಎಪಿಎಂಸಿ ಆವರಣದಲ್ಲಿ ಒಂದು ಸಾವಿರ ಮೆಟ್ರಿಕ್ ಟನ್ ನೂತನ ಗೋದಾಮು ಉದ್ಘಾಟನೆ ಮಾಡಲಿದ್ದಾರೆ ಹಾಗೂ ಕೆಸಿಸಿ ಬ್ಯಾಂಕ್ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಶಿಗ್ಗಾವಿ ಎಪಿಎಂಸಿ ಆವರಣದಲ್ಲಿ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮ ಕುರಿತಂತೆ ಅಧಿಕಾರಿಗಳ ಜವಾಬ್ದಾರಿ ಬಗ್ಗೆ ಅಪರ ಜಿಲ್ಲಾಧಿಕಾರಿ ಡಾ| ಎನ್. ತಿಪ್ಪೇಸ್ವಾಮಿ ವಿವರಿಸಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ಉಪ ವಿಭಾಗಾಧಿಕಾರಿ ಅನ °ಪೂರ್ಣ ಮುದಕಮ್ಮನವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.