Advertisement

ಇಂದು ಬೆಳಗ್ಗೆ ಮಗ ಕರೆ ಮಾಡಿದ್ದ…: ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ತಂದೆ ಶೇಖರಗೌಡ

04:14 PM Mar 01, 2022 | Team Udayavani |

ಬೆಂಗಳೂರು: “ಇಂದು ಮುಂಜಾನೆ ಮಗ ನವೀನ್ ದೂರವಾಣಿ ಕರೆ ಮಾಡಿದ್ದ. ಪ್ರತಿ ದಿನ ಎರಡು ಮೂರು ಬಾರಿ ದೂರವಾಣಿ ಮೂಲಕ ಮಾತಾಡುತ್ತಿದ್ದ” ಇದು ಉಕ್ರೇನ್ ನಲ್ಲಿ ರಷ್ಯಾ ಶೆಲ್ ದಾಳಿಗೆ ಸಾವನ್ನಪ್ಪಿದ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ರ ತಂದೆಯ ಮಾತು.

Advertisement

ಉಕ್ರೇನ್ ನಲ್ಲಿ ರಾಜ್ಯದ ವಿದ್ಯಾರ್ಥಿ ಸಾವನ್ನಪ್ಪಿದ ಸುದ್ದಿ ತಿಳಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ನವೀನ್ ಅವರ ತಂದೆ ಶೇಖರಗೌಡ ಅವರಿಗೆ ಕರೆ ಮಾಡಿ ಸಾಂತ್ವಾನ ಹೇಳಿದರು.

ಇದನ್ನೂ ಓದಿ:ರಷ್ಯಾ- ಉಕ್ರೇನ್ ಯುದ್ಧ: ರಷ್ಯಾ ಶೆಲ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ಸಾವು

ದೂರವಾಣಿಯಲ್ಲಿ ಮಾತನಾಡಿ ನವೀನ್ ಬಗ್ಗೆ ಮಾಹಿತಿ ಪಡೆದರು. “ಇದು ನಿಜಕ್ಕೂ ದೊಡ್ಡ ದುರಂತ. ದೇವರು ನವೀನ್ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ನೀವು ಧೈರ್ಯದಿಂದಿರಿ. ನವೀನ್ ಅವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆದಿದೆ. ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ” ಎಂದು ಸಿಎಂ ಸಾಂತ್ವಾನ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next