Advertisement

ವೈಮಾನಿಕ ಸಮೀಕ್ಷೆಗಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಬೆಳಗಾವಿಗೆ ಆಗಮನ:ರೈತ ಸಂಘದಿಂದ ಪ್ರತಿಭಟನೆ

03:23 PM Aug 25, 2020 | Mithun PG |

ಬೆಳಗಾವಿ.    ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳ ಪ್ರವಾಹ ಹಾಗೂ ಅತಿಯಾದ ಮಳೆಯಿಂದ ಹಾನಿಗೊಳಗಾದ ಬೆಳಗಾವಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಂಗಳವಾರ ಬೆಳಗಾವಿ ಗೆ ಆಗಮಿಸಿದರು.

Advertisement

ಬೆಳಿಗ್ಗೆ ಬೆಳಗಾವಿ ವಿಮಾನ ನಿಲ್ದಾಣ ದಲ್ಲಿ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಗಳು ಎರಡೂ ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಹಾನಿಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.      ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ, ಜಗದೀಶ್ ಶೆಟ್ಟರ್, ಕಂದಾಯ ಸಚಿವ ಆರ್ ಅಶೋಕ ಮೊದಲಾದವರು ಉಪಸ್ಥಿತರಿದ್ದರು.

ಇನ್ನೊಂದು ಕಡೆ ಬೆಳಗಾವಿ ವಿಮಾನ ನಿಲ್ದಾಣದ ಮುಖ್ಯ ದ್ವಾರದ ಬಳಿ ರೈತ ಸಂಘದ ಕಾರ್ಯಕರ್ತರು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎ ಪಿ ಎಂ ಸಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿ ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next