Advertisement

ಡಿನೊಟಿಫಿಕೇಶನ್‌ ಪ್ರಕರಣದ ವಿಚಾರಣೆಗೆ ಸುಪ್ರೀಂ ತಡೆ : ಸಿಎಂ ಬಿಎಸ್‌ವೈಗೆ ನೆಮ್ಮದಿ

10:07 PM Apr 05, 2021 | Team Udayavani |

ಹೊಸದಿಲ್ಲಿ: ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಎಂ ಬಿಎಸ್‌ವೈ ಮತ್ತು ಇತರರ ವಿರುದ್ಧ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆಯಾಜ್ಞೆ ನೀಡಿದೆ.

Advertisement

2012ರಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯ ಆಧಾರದಲ್ಲಿ ಸಿಎಂ ಬಿಎಸ್‌ವೈ ವಿರುದ್ಧ ಕ್ರಿಮಿನಲ್‌ ವಿಚಾರಣೆ ಕೈಗೆತ್ತಿಕೊಳ್ಳುವಂತೆ ವಿಶೇಷ ವಿಚಾರಣ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಬಿಎಸ್‌ವೈ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಎಸ್‌.ಎ. ಬೋಬ್ದೆ ನೇತೃತ್ವದ ನ್ಯಾಯಪೀಠವು ಮಾ. 21ರಂದು ಹೈಕೋರ್ಟ್‌ ನೀಡಿದ್ದ ಆದೇಶವನ್ನು ಅಮಾನತುಗೊಳಿಸಿ, ಬಿಎಸ್‌ವೈ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ಆದೇಶ ಹೊರಡಿಸಿತು.

2008-12ರಲ್ಲಿ ಸಿಎಂ ಆಗಿದ್ದ ಅವಧಿಯಲ್ಲಿ ಬಿಎಸ್‌ವೈ ಅವರು ಖಾಸಗಿಯವರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ 20 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್‌ ಮಾಡಿದ್ದರು ಎಂದು ದೂರು ದಾಖಲಾಗಿತ್ತು.

ಇದನ್ನೂ ಓದಿ :ರಮೇಶ್‌ ಜಾರಕಿಹೊಳಿಗೆ ಕೋವಿಡ್ ಬಂದಿರುವುದು ಅನುಮಾನ: ವಕೀಲ ಜಗದೀಶ್‌

Advertisement

Udayavani is now on Telegram. Click here to join our channel and stay updated with the latest news.

Next