ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಾಂಗ್ಲಾದೇಶ ಮೂಲದ ಯುವತಿಯ ಮೇಲೆ ಆರು ಮಂದಿ ಸಾಮೂಹಿಕ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಪ್ರತಿಕ್ರಯೆ ನೀಡಿದ್ದು, ಇದು ಅಮಾನುಷ ಕೃತ್ಯ. ಇದನ್ನು ಯಾರು ಕೂಡ ಸಹಿಸೋದಿಲ್ಲ ಎಂದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತವರಿಗೆ ಕೃತ್ಯವೆಸಗಿದವರಿಗೆ ತಕ್ಕ ಶಿಕ್ಷೆಯಾಗಲಿದೆ. ಇವರ ವಿರುದ್ದವೂ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಇದನ್ನೂ ಓದಿ:ಹಿಂದೆ ಮಾಡಿದ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುತ್ತಿದೆ: ಕುಮಾರಸ್ವಾಮಿ
ನಗರದಲ್ಲಿ ಮಹಿಳೆಯೋರ್ವಳ ಸಹಾಯದಿಂದ ಆರು ಮಂದಿ ಆರೋಪಿಗಳು ಬಾಂಗ್ಲಾದೇಶದ 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ತಮ್ಮ ಕೌರ್ಯವನ್ನು ಚಿತ್ರೀಕರಿಸಿಕೊಂಡು ವೈರಲ್ ಮಾಡಿದ್ದಾರೆ. ಈ ಸಂಬಂಧ ಬಾಂಗ್ಲಾದೇಶದ ಸಾಗರ್, ಮೊಹಮ್ಮದ್ ಬಾಬಾ ಶೇಖ್, ರಿದಾಯ್ ಬಾಬು ಹಾಗೂ ಹೈದರಾಬಾದ್‌ನ ಹಕೀಲ್ ಎಂಬವರನ್ನು ಬಂಧಿಸಲಾಗಿದೆ.
ಜಿಲ್ಲೆಗಳಲ್ಲಿ ಸಭೆ: ಒಂದು ವಾರ ಅಥವಾ ಹದಿನೈದು ದಿನಕ್ಕೊಮ್ಮೆ ಜಿಲ್ಲೆಗೆ ಹೋಗಿ ಸಭೆ ಮಾಡಲು ಯೋಚನೆ ಮಾಡಿದ್ದೇನೆ. ಇವತ್ತು ತುಮಕೂರಿಗೆ ಹೋಗಿ ಅಲ್ಲಿ ಕೊವೀಡ್ ಸ್ಥಿತಿಗತಿ ಬಗ್ಗೆ ಸಭೆ ಮಾಡುತ್ತೇನೆ ಎಂದರು.