Advertisement

ಬಿಮ್ಸ್ ಅವ್ಯವಸ್ಥೆಗೆ ಕಡಿವಾಣ ಹಾಕಲು ಕ್ರಮ ಕೈಗೊಂಡ ಸಿಎಂ ಯಡಿಯೂರಪ್ಪ

01:45 PM Jun 04, 2021 | Team Udayavani |

ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್)ಯಲ್ಲಿನ ಅವ್ಯವಸ್ಥೆಯ ಬಗ್ಗೆ ಸಾಕಷ್ಟು ದೂರುಗಳ ಬಂದ ಹಿನ್ನೆಲೆಯಲ್ಲಿ ಅದನ್ನು ಸರಿಪಡಿಸಲು ಮುಂದಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ  ತಕ್ಷಣದಿಂದಲೇ ಜಾರಿಗೆ ಬರುವಂತೆ ಹಿರಿಯ ಐಎಎಸ್ ಅಧಿಕಾರಿಯನ್ನು ಅಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದ್ದಾರೆ.

Advertisement

ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಕೋವಿಡ್ ನಿಯಂತ್ರಣ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಳಗಾವಿ ಪ್ರಾದೇಶಿಕದ ಆಯುಕ್ತ ಆದಿತ್ಯ ಆಮ್ಲನ್ ಬಿಸ್ವಾಸ್ ಅವರನ್ನು ಅಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ತಕ್ಷಣವೇ ಅವರು ಅಧಿಕಾರ ಸ್ವೀಕರಿಸಿ ಅಲ್ಲಿನ ವ್ಯವಸ್ಥೆ ಸರಿಪಡಿಸಲಿದ್ದಾರೆ ಎಂದರು.

ಇದನ್ನೂ ಓದಿ:ಮೈಸೂರಿನ ಐಎಎಸ್ ಅಧಿಕಾರಿಗಳ ಸಂಘರ್ಷ ನನ್ನ ಕೈ ಮೀರಿದೆ: ಅಸಹಾಯಕತೆ ತೋರಿದ ಸಚಿವ ಸೋಮಶೇಖರ್

ಪ್ರತಿಭಟನೆ ಬಿಸಿ: ಬೆಳಗಾವಿಗೆ ಆಗಮಿಸಿದ ಸಿಎಂ ಬಿಎಸ್ ವೈಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದ್ದು, ಕಬ್ಬಿನ ಬಾಕಿ ಬಿಲ್ ಗಾಗಿ ಆಗ್ರಹಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಶುಕ್ರವಾರ ಬೆಳಗ್ಗೆ ಸುವರ್ಣ ವಿಧಾನಸೌಧ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ಕಬ್ಬಿನ ಬಿಲ್ ಬಾಕಿ ಪಾವತಿಸಲು ಸಿಎಂ ಕ್ರಮ ಕೈಗೊಳ್ಳಬೇಕು.ತರಕಾರಿ ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಆರೋಪಿಸಿ ರೈತ ಮುಖಂಡ ಚೂನಪ್ಪ ಪೂಜಾರಿ, ರಾಘವೇಂದ್ರ ನಾಯಕ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next