Advertisement

ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣ: ಆನ್ ಲೈನ್ ಮೂಲಕ ಭೂಮಿಪೂಜೆಯಲ್ಲಿ ಭಾಗವಹಿಸಿದ ಬಿಎಸ್ ವೈ

04:42 PM Sep 15, 2020 | keerthan |

ಬೆಂಗಳೂರು: ದಿವಂಗತ ನಟ ಡಾ. ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಆನ್ ಲೈನ್ ಮೂಲಕ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು

Advertisement

ವಿಷ್ಣುವರ್ಧನ ಅವರ 70ನೇ ವರ್ಷದ ಹುಟ್ಟುಹಬ್ಬದ, ವಿಶೇಷ ಸಂದರ್ಭದಲ್ಲಿ ದಿವಂಗತ  ಡಾ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದ್ದೇನೆ. ವಿಷ್ಣುವರ್ಧನ್ ಕನ್ನಡ ನಾಡು ಕಂಡ ಅಪ್ರತಿಮ ಕಲಾವಿದರಲ್ಲಿ ಪ್ರಮುಖರು. ಶ್ರೇಷ್ಠ ನಾಯಕ ನಟರು ಮಾತ್ರವಲ್ಲದೇ ತಮ್ಮ ವ್ಯಕ್ತಿತ್ವದಲ್ಲೂ ಬಹಳಷ್ಟು ಶ್ರೇಷ್ಠ ಗುಣಗಳನ್ನು ಹೊಂದಿದ್ದು ಯುವಜನರಿಗೆ ಸ್ಪೂರ್ತಿಯ ಸೆಲೆಯಾಗಿದ್ದರು ಎಂದರು.

ತಮ್ಮ ಅಭಿಮಾನಿಗಳ ಪಾಲಿಗೆ “ಸಾಹಸ ಸಿಂಹ”ಎಂದೇ ಪ್ರಖ್ಯಾತರಾದ ವಿಷ್ಣು ತಮ್ಮ ಶಿಸ್ತು, ಸಂಯಮಗಳಿಂದ ಎಲ್ಲರ ಪ್ರೀತಿಯನ್ನು ಗೆದ್ದಿದ್ದರು. ಚಿತ್ರರಂಗಕ್ಕೆ ರಾಜ್‍ಕುಮಾರ್ ಅವರ ನಂತರದ ಪೀಳಿಗೆಯಲ್ಲಿ ಮಹತ್ವದ ಕೊಡುಗೆ ನೀಡಿರುವವರಲ್ಲಿ ವಿಷ್ಣುವರ್ಧನ್ ಅವರು ಸಹ ಸೇರಿದ್ದಾರೆ.ಸತತವಾಗಿ 38 ವರ್ಷಗಳ ಕಾಲ, ನೂರಾರು ಸದಭಿರುಚಿಯ ಚಿತ್ರಗಳನ್ನು ಮಾಡುವ ಮೂಲಕ ಜನರ ಮನಸಿನಲ್ಲಿ ಶಾಶ್ವತವಾದ ಸ್ಥಾನವನ್ನು ಪಡೆದುಕೊಂಡಿದ್ದಾರೆ. “ನಾಗರಹಾವು”ಸಿನಿಮಾದಿಂದ “ಆಪ್ತರಕ್ಷಕ”ಸಿನಿಮಾವರೆಗಿನ, ಅವರ ಸಾಧನೆಯನ್ನು ನಾನು ಸಾಕಷ್ಟು ಗಮನಿಸಿದ್ದೇನೆ ಎಂದರು.

ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಈಗಾಗಲೇ ತಡವಾಗಿದೆ. ಆದ್ದರಿಂದ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ವಿಷ್ಣುವರ್ಧನ್ ಅವರ ತವರು ಜಿಲ್ಲೆ ಮೈಸೂರಿನಲ್ಲಿ, ಅವರ ಸ್ಮಾರಕ ನಿರ್ಮಾಣವಾಗುತ್ತಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ ಎಂದು ಬಿಎಸ್ ವೈ ಹೇಳಿದರು

Advertisement
Advertisement

Udayavani is now on Telegram. Click here to join our channel and stay updated with the latest news.

Next