Advertisement

ಯಡಿಯೂರಪ್ಪ ನಿವಾಸದಲ್ಲೂ ಕೋವಿಡ್ ಕಂಟಕ: ಕ್ವಾರಂಟೈನ್ ಗೆ ಒಳಗಾದ ಸಿಎಂ

07:42 PM Jul 10, 2020 | keerthan |

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಕೆಲವು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಮುಂದಿನ ಕೆಲ ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು ನಿರ್ಧರಿಸಿದ್ದಾರೆ.

Advertisement

ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದು,  ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ. ವಿಡಿಯೋ ಕಾನ್ಫರೆನ್ಸ್ ‌ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ, ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆಯ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಸಿಎಂ ಗೃಹಕಚೇರಿ ಕೃಷ್ಣಾದ ಟಿಲಿಫೋನ್ ಆಪರೇಟರ್, ಇಬ್ಬರು ಎಸ್ಕಾರ್ಟ್ಸ್, ಧವಳಗಿರಿ ನಿವಾಸದ ಬಾಣಸಿಗ, ಕಾರು ಚಾಲಕ ಸೇರಿದಂತೆ ಹತ್ತು ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಸಿಎಂ ಮುಂದಿನ ಕೆಲವು ದಿನಗಳ ಕಾಲ ಮನೆಯಲ್ಲಿಯೇ ಕೆಲಸ ನಿರ್ವಹಿಸಲಿದ್ದಾರೆ. ಇಂದು ವಿಧಾನಸೌಧದಲ್ಲಿ ನಿವೃತ್ತಿ ಹೊಂದಿದ ವಿಧಾನ ಪರಿಷತ್ ಸದಸ್ಯರ ಬೀಳ್ಕೊಡುಗೆ ಸಮಾರಂಭಕ್ಕೂ ಬಿಎಸ್ ವೈ ಹಾಜರಾಗದೆ, ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next