Advertisement
ಮೊದಲನೇ ಪ್ಯಾಕೇಜ್‌ನಲ್ಲಿ ದಿನದ ದುಡಿಮೆ ನಂಬಿ ಜೀವನ ನಡೆಸುತ್ತಿರುವವರು, ಬೆಳೆ ಬೆಳೆದು ನಷ್ಟ ಅನುಭವಿಸಿದ ರೈತರು ಹಾಗೂ ಕೆಲಸ ಇಲ್ಲದೆ ಕಷ್ಟ ಆನುಭವಿಸುತ್ತಿರುವ ಆಟೋ, ಟ್ಯಾಕ್ಸಿ ಚಾಲಕರು, ಕುಶಲ ಕರ್ಮಿಗಳು, ಬೀದಿ ವ್ಯಾಪಾರಿಗಳು ಸೇರಿ ಶ್ರಮಿಕ ವರ್ಗಕ್ಕೆ 1,250 ಕೋಟಿ ರೂ. ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿತ್ತು. ಎರಡನೇ ಹಂತದಲ್ಲಿ ಲಾಕ್‌ಡೌನ್‌ನಿಂದ ಕಷ್ಟ ಅನುಭವಿಸುತ್ತಿದ್ದ ಇತರ ವರ್ಗದವರಿಗೂ 500 ಕೋಟಿ ರೂ. ಪ್ಯಾಕೇಜ್ ಘೋಷಿಸಲಾಗಿದೆ. ಈ ಮೂಲಕ ಸಾಧ್ಯವಾದಷ್ಟೂ ಜನರಿಗೆ ನೆರವು ಒದಗಿಸುವ ಪ್ರಯತ್ನ ಆಗಿದೆ ಎಂದೇ ಹೇಳಬಹುದು.
Related Articles
Advertisement
ಶಾಲೆ ಮುಚ್ಚಿದ್ದರಿಂದ ಮಕ್ಕಳು ಮಧ್ಯಾಹ್ನದ ಬಿಸಿಯೂಟ ತಪ್ಪಿದಂತಾಗಿತ್ತು. ಬಿಸಿಯೂಟ ಬದಲಿಗೆ ಆಹಾರಧಾನ್ಯ ಮನೆಗೆ ತಲುಪಿಸುವ ತೀರ್ಮಾನ ಕೈಗೊಂಡಿದ್ದರಿಂದ ಮಕ್ಕಳ ಹೆತ್ತವರಿಗೂ ಅನುಕೂಲವಾಗಿತ್ತು. ಇದೀಗ ಆಹಾರ ಧಾನ್ಯದ ಜತೆಗೆ ಅರ್ಧ ಕೆ.ಜಿ. ಹಾಲಿನ ಪುಡಿ ಎರಡು ತಿಂಗಳು ನೀಡಲು ತೀರ್ಮಾನಿಸಿರುವುದು ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ಸಹಕಾರಿಯಾಗಲಿದೆ.
ಖುದ್ದು ಸಭಾಪತಿಯವರು ಸೇರಿದಂತೆ ಶಿಕ್ಷಕರು ಹಾಗೂ ಪದ ವೀಧರರನ್ನು ಪ್ರತಿನಿಧಿಸುವ ವಿಧಾನಪರಿಷತ್ ಸದಸ್ಯರು ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರ ಮೇಲೆ ಹೇರಿದ್ದ ಒತ್ತಡದಿಂದಾಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೆ ತಲಾ 5 ಸಾವಿರ ರೂ. ಅದೇ ರೀತಿ ವಕೀಲರ ಸಂಘದ ಬೇಡಿಕೆಗೆ ಸ್ಪಂದಿಸಿ ಕಲ್ಯಾಣ ನಿಧಿಗೆ 5 ಕೋಟಿ ರೂ. ಒದಗಿಸಿರುವುದು ಈಗಿನ ಅಗತ್ಯತೆಗೆ ಸ್ಪಂದನೆಯ ಕೆಲಸವಾಗಿದೆ.
ಇವೆಲ್ಲರ ಜತೆಗೆ ಕೈಗಾರಿಕೆಗಳಿಗೂ ಸ್ವಲ್ಪ ಮಟ್ಟಿನ ರಿಯಾಯಿತಿ, ವಿನಾಯಿತಿ ಘೋಷಣೆ ಮಾಡುವ ಮೂಲಕ ಸರಕಾರ ನಿಮ್ಮ ಜತೆಗಿದೆ ಎಂಬ ಧೈರ್ಯ ತುಂಬಿರುವುದು ಒಳ್ಳೆಯ ಬೆಳವಣಿಗೆ.