Advertisement

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

11:49 PM Jun 18, 2021 | Team Udayavani |

ಬೆಂಗಳೂರು: ಮಳೆಗಾಲದಲ್ಲಿ ಸಂಭವಿಸಬಹುದಾದ ಅತಿವೃಷ್ಟಿ ತಡೆ ಕುರಿತು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ಶನಿವಾರ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಅದರ ಪೂರ್ವಭಾವಿ ಸಭೆ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.

Advertisement

ಉತ್ತರ ಕರ್ನಾಟಕದ ಪ್ರಮುಖ ನದಿಗಳಾದ ಕೃಷ್ಣಾ ಮತ್ತು ಭೀಮಾ ನದಿಗಳ ಕಣಿವೆಯಲ್ಲಿ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣೆ ಕುರಿತಂತೆ ಮಹತ್ವದ ಅಂಶಗಳನ್ನು ಈ ಸಭೆಯಲ್ಲಿ ಚರ್ಚಿಸಲಾಗಿದೆ.

ಇದನ್ನೂ ಓದಿ :ಬೆಳಗಾವಿ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ ; ಶೋಧ ಕಾರ್ಯ

ಸಭೆಯಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಮುಖ್ಯಸ್ಥ ಮಂಜುನಾಥ ಪ್ರಸಾದ್, ಅಂತರರಾಜ್ಯ ಜಲವಿವಾದಗಳ ಪ್ರಧಾನ ಸಲಹೆಗಾರ ಅನೀಲ್ ಕುಮಾರ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಲಕ್ಷ್ಮಣ ರಾವ್ ಪೇಶ್ವೆ, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next