Advertisement
ಎರಡೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳು, ಸವಾಲುಗಳ ಕುರಿತು ಮುಕ್ತವಾಗಿ ಚರ್ಚಿಸಲಾಯಿತು. ಪಾಸಿಟಿವಿಟಿ ದರ ಶೇ. 10 ಕ್ಕಿಂತ ಕಡಿಮೆ ಮಾಡುವಂತೆ ಸೂಚಿಸಲಾಯಿತು. ಅಂತೆಯೇ ಮರಣ ಪ್ರಮಾಣ ರಾಜ್ಯದಲ್ಲಿ 1.7 % ಇದ್ದು, ಇದನ್ನು ಕಡಿಮೆ ಮಾಡುವಂತೆ ಸಿಎಂ ಸೂಚಿಸಿದರು.
Related Articles
Advertisement
ಶಾಸಕರು ಹಾಗೂ ಸಂಸದರು ತಮ್ಮ ಕ್ಷೇತ್ರಗಳಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಿ, ಸೋಂಕಿತರನ್ನು ಪತ್ತೆ ಹಚ್ಚಿ ಸಕಾಲದಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಇದರಿಂದ ಮರಣ ಪ್ರಮಾಣ ಕಡಿಮೆಯಾಗುವುದು. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳು, ಔಷಧ, ಆಮ್ಲಜನಕ, ವಿವಿಧ ಉಪಕರಣಗಳು ಅಗತ್ಯಕ್ಕೆ ಅನುಗುಣವಾಗಿ ಸಮರ್ಪಕವಾಗಿ ಹಂಚಿಕೆಯಾಗಬೇಕು. ಎಲ್ಲಿಯೂ ಸಮಸ್ಯೆ ತಲೆದೋರದಂತೆ ಸಂಪನ್ಮೂಲಗಳ ದಕ್ಷ ಬಳಕೆಯನ್ನು ಖಾತರಿಪಡಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಆಶಾ ಕಾರ್ಯಕರ್ತೆಯರಿಗೆ ಶೀಘ್ರವೇ ವೇತನ: ಸಂವಾದದಲ್ಲಿ ಭಾಗವಹಿಸಿದ ಶಾಸಕರು, ಸಂಸದರು, ಕೋವಿಡ್ 19 ನಿರ್ವಹಣೆ ಜೊತೆಗೆ ತಳಹಂತದ ಹಲವಾರು ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದರು. ಇವುಗಳನ್ನು ಶೀಘ್ರವೇ ಬಗೆಹರಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು. ಆಶಾ ಕಾರ್ಯಕರ್ತೆಯರ ಬಾಕಿ ವೇತನ ಬಿಡಗಡೆಗೆ ಈಗಾಗಲೇ ಕ್ರಮ ವಹಿಸಲಾಗಿದ್ದು, ಎರಡು ಮೂರು ದಿನಗಳಲ್ಲಿಯೇ ದೊರೆಯಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಪ್ರತಿ ತಾಲ್ಲೂಕಿಗೆ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಸರ್ಕಾರವು ಈಗಾಗಲೇ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ 50 ಲಕ್ಷ ರೂ. ಗಳನ್ನು ಕೋವಿಡ್ ನಿರ್ವಹಣೆಗೆ ಬಳಕೆ ಮಾಡಲು ಅನುಮತಿ ನೀಡಲಾಗಿದೆ. ಅಲ್ಲದೆ ಗ್ರಾಮ ಪಂಚಾಯಿತಿಗಳಿಗೆ ತಲಾ 50 ಸಾವಿರ ರೂ. ಬಿಡುಗಡೆ ಮಾಡಲಾಗುತ್ತಿದೆ ಎಂದು ಸಿಎಂ ತಿಳಿಸಿದರು.
ಸಭೆಯಲ್ಲಿ ವೈದ್ಯರ ಕೊರತೆ ಕುರಿತು ಚರ್ಚೆ ನಡೆಯಿತು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಈಗಾಗಲೇ 1200 ವೈದ್ಯರ ನೇಮಕ ಮಾಡಿಕೊಳ್ಳುತ್ತಿದ್ದು, ಶೀಘ್ರವೇ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು