ಬೆಂಗಳೂರು: ಲಾಕ್ ಡೌನ್ ವಿಸ್ತರಣೆಯ ಕುರಿತು, ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ನೋಡಿಕೊಂಡು ನಿರ್ಧಾರ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಲಾಕ್ ಡೌನ್ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಲಾಕ್ ಡೌನ್ ಮುಂದುವರೆಸುವ ಬಗ್ಗೆ ಇವರೆಗೆ ಯಾವ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ಕೋವಿಡ್ ಸೋಂಕಿನ ಪರಿಸ್ಥಿತಿಯನ್ನು ನೋಡಿ ಸೂಕ್ತ ನಿರ್ಣಯವನ್ನು ಕೈಗೊಳ್ಳುತ್ತೇವೆ ಎಂದರು.
ಇದನ್ನೂ ಓದಿ : ವ್ಯಾಪಾರಗಳಿಗೆ ಕೋವಿಡ್ ಜಾಗೃತಿ ಮೂಡಿಸಿದ ಪಿಎಸ್ ಐ
ಜೂನ್ 5, 6 ರ ವೇಳೆಗೆ ಪರಿಸ್ಥಿತಿ ನೋಡಿಕೊಂಡು, ತಜ್ಞರ ಜತೆ, ಸಚಿವರ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಜಾಸ್ತಿ ಇದೆ. ಲಾಕ್ ಡೌನ್ ವಿಸ್ತರಣೆ ಮಾಡಿ ಅಂತ ತಜ್ಞರು ಸದ್ಯ ಯಾವುದೇ ವರದಿ ಕೊಟ್ಟಿಲ್ಲ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತಗೊಂಡಿಲ್ಲ. ಕೇಂದ್ರ ಸರ್ಕಾರ ಆಯಾ ರಾಜ್ಯಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲು ಸೂಚಿಸಿದೆ ಎಂದು ಹೇಳಿದರು.