ಶಿವಮೊಗ್ಗ: ಬಿಪಿಎಲ್ ಕಾರ್ಡ್ ಬಗ್ಗೆ ಹೆಚ್ಚು ಚರ್ಚೆ ಮಾಡುವ ಅಗತ್ಯ ಇಲ್ಲ. 2017 ರ ಮಾನದಂಡವೇ ಮುಂದುವರೆಯುತ್ತದೆ. ಕೆಲವು ಶ್ರೀಮಂತರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಅನಗತ್ಯವಾಗಿ ಯಾರು ಕಾರ್ಡ್ ಪಡೆದಿದ್ದಾರೆಯೋ ಅಂಥವರು ಬಿಪಿಎಲ್ ಕಾರ್ಡ್ ನ್ನು ವಾಪಾಸ್ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು. ಅನಗತ್ಯ ಬಿಪಿಎಲ್ ಕಾರ್ಡ್ ಗಳನ್ನು ಹಿಂಪಡೆಯಬೇಕೆಂದು ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಿದ್ದೇನೆ ಎಂದರು.
ಇದನ್ನೂ ಓದಿ : ಮುಂಬೈ- ಪುಣೆ ಎಕ್ಸ್ ಪ್ರೆಸ್ ವೇ ನಲ್ಲಿ ಸರಣಿ ಅಪಘಾತ: ಐವರ ದುರ್ಮರಣ, ಐವರು ಗಂಭೀರ
ಮೀಸಲಾತಿ ಹೋರಾಟದ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ಈ ವಿಚಾರದಲ್ಲಿ ಕಾನೂನು ರೀತಿ ಏನು ಕ್ರಮ ಕೈಗೊಳ್ಳಬೇಕು ಅದನ್ನು ಮಾಡುತ್ತೇನೆ. ಇದರ ಬಗ್ಗೆ ಬೆಂಗಳೂರಿಗೆ ಹೋದ ನಂತರ ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ. ಮುಂದಿನ ದಿನಗಳಲ್ಲಿ ಎಲ್ಲರಿಗೂ ಸಮಾಧಾನ ತರುವ ರೀತಿ ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಉಪ ಚುನಾವಣೆಯ ಕುರಿತು ಮಾತಾನಾಡಿದ ಅವರು, ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಈ ಬಗ್ಗೆ ರಾಜ್ಯಾಧ್ಯಕ್ಷರು ಗಮನ ಹರಿಸುತ್ತಾರೆ. ಮೂರು ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.