Advertisement

ಸಿಎಂ ಬಿಎಸ್‌ವೈ ಪ್ರತಿಕೃತಿ ದಹಿಸಿ ಆಕ್ರೋಶ

02:32 PM Feb 07, 2021 | Adarsha |

ಬಸವನಬಾಗೇವಾಡಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ವಿಷಯದಲ್ಲಿ ಮುಖ್ಯಮಂತ್ರಿ ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆಂದು ಆರೋಪಿಸಿ ಪಂಚಮಸಾಲಿ ಸಮಾಜ ತಾಲೂಕು ಘಟಕದ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮುಖ್ಯಮಂತ್ರಿಗಳ ಪ್ರತಿಕೃತಿ ಧಹಿಸಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಶನಿವಾರ ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮಾಜದ ಯುವಘಟಕದ ಕಾರ್ಯಕರ್ತರು ಹಾಗೂ ಸಮಾಜ ಬಾಂಧವರು ಮನಗೂಳಿ- ಬಿಜ್ಜಳ ಬಾರಖೇಡ- ಬೀಳಗಿ ರಾಜ್ಯ ಹೆದ್ದಾರಿ ತಡೆದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ, ಪುರಸಭೆ ಸದಸ್ಯ ಅಶೋಕ ಹಾರಿವಾಳ ಹಾಗೂ ತಾಲೂಕು ಘಟಕದ ಅಧ್ಯಕ್ಷ ಸಂಜು ಬಿರಾದಾರ ಮಾತನಾಡಿ, ನಮ್ಮದು ರಾಷ್ಟ್ರೀಯ ಪಕ್ಷ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವದು. ನಮ್ಮ ರಾಷ್ಟ್ರೀಯ ನಾಯಕರು ತಿರ್ಮಾನಿಸಬೇಕು ಎಂದು ಅಧಿವೇಶನದಲ್ಲಿ ಮುಖ್ಯಮಂತ್ರಿ ಹೇಳಿದ್ದು ಖಂಡಿನೀಯ ಎಂದರು.

ರಾಜ್ಯದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದವರ ಬೆಂಬಲದೊಂದಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿರುವ ಯಡಿಯೂರಪ್ಪ ಅಧಿವೇಶನದಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿರುವುದು ಸಮುದಾಯಕ್ಕೆ ಅವಮಾನ ಎಸಗಿದಂತಾಗಿದೆ. ನಮ್ಮ ಸಮಾಜದ ಸ್ವಾಮೀಜಿಗಳು 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಸುಮಾರು 24 ದಿನದಿಂದ 500 ಕಿ.ಮೀ. ಪಾದಯಾತ್ರೆ ಮಾಡುತ್ತಿದ್ದಾರೆ.

ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ಹಲವಾರು ಬಾರಿ ತಮ್ಮ ಸಚಿವ ಸಂಪುಟದ ಸದಸ್ಯರನ್ನು ಪಾದಯಾತ್ರೆ ಸಂದರ್ಭದಲ್ಲಿ ಸಂಧಾನಕ್ಕೆ ಕಳುಹಿಸಿ ನಿಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಈಗ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳು ದ್ವಂದ ಹೇಳಿಕೆ ಬಿಟ್ಟು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.

Advertisement

ಇದನ್ನೂ ಓದಿ:ತ್ಯಾಜ್ಯ ನಿರ್ವಹಣಾ ಘಟಕ ಪರಿಶೀಲನೆ

ಮುಖಂಡರಾದ ಮಹಾಂತೇಶ ಜಾಲಗೇರಿ, ಶ್ರೀಕಾಂತ ಕೊಟ್ರಶೆಟ್ಟಿ, ಸಂಗಮೇಶ ಜಾಲಗೇರಿ, ಸಿದ್ದು ಕೊಟ್ರಶೆಟ್ಟಿ, ಪ್ರಶಾಂತ ಮುಂಜಾನೆ, ಉಮೇಶ ಅವಟಿ, ಅಮೃತ ಬಾಗೇವಾಡಿ, ಮುತ್ತು ಮಿಣಜಗಿ, ಅರುಣ ಗೊಳಸಂಗಿ, ಸಂಗಮೇಶ ಪಾಟೀಲ, ಗುರು ವಂದಾಲ, ಸುರೇಶ ಹಾರಿವಾಳ, ಮಲ್ಲು ಅಕ್ಕಿ, ಪ್ರಶಾಂತ ಗೊಳಸಂಗಿ, ಶ್ರೀಶೈಲ ಹೆಬ್ಟಾಳ, ವಿಜು ರಗಟಿ, ಮುತ್ತು ರಾಂಪುರ, ವಿಜು ಅರಸನಾಳ ಇದ್ದರು.

 

 

Advertisement

Udayavani is now on Telegram. Click here to join our channel and stay updated with the latest news.

Next