ಬೆಂಗಳೂರು: ಜಿಲೆಟಿನ್ ಸ್ಫೋಟ ನಡೆದ ಚಿಕ್ಕಬಳ್ಳಾಪುರಕ್ಕೆ ಗೃಹ ಸಚಿವರು ಸೇರಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇದು ರಾಜ್ಯದಲ್ಲಿ ನಡೆದಿರುವ ಎರಡನೇ ಘಟನೆ. ಇದು ಕಾನೂನು ಬಾಹಿರವಾಗಿ ನಡೆದಿರುವ ಘಟನೆ. ಇಂತಹ ಘಟನೆಗಳ ತಡೆಗೆ ಏನು ಕಠಿಣ ಕ್ರಮ ಕೈಗೊಳ್ಳಬಹುದು ಎಂದು ಯೋಚನೆ ಮಾಡುತ್ತಿದ್ದೇವೆ. ಯಾರೇ ಇದ್ದರೂ ಕಾನೂನು ರೀತಿ ಕ್ರಮ ತಗೆದುಕೊಳ್ಳುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇರುವುದೇ ಆರೋಪ ಮಾಡಲು. ಅವರ ಬಗ್ಗೆ ತಲೆಕೆಡೆಸಿಕೊಳ್ಳಬೇಡಿ. ಆದರೆ ಯಾವ ರೀತಿ ಕಠಿಣ ಕ್ರಮ ಕೈಗೊಳ್ಳಬೇಕು ಅದರತ್ತ ಇನ್ನು ಮುಂದೆ ಗಮನ ಹರಿಸುತ್ತೇವೆ ಎಂದರು.
ಇದನ್ನೂ ಓದಿ:ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ: ಎಡಿಜಿಪಿ ಪ್ರತಾಪ್ ರೆಡ್ಡಿ
ಪದೇ ಪದೇ ಈ ರೀತಿ ಆಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾವು ನೀವು ಏನ್ ಮಾಡೋಕೆ ಆಗುತ್ತೆ ರೀ? ನಮ್ಮ ಜಾಗದಲ್ಲಿ ನೀವು ಇದ್ದರೆ ನೀವು ಏನು ಮಾಡ್ತಿದ್ರಿ ಹೇಳಿ? ಬೆಳಗ್ಗಿನ ಜಾವ ಹೋಗಿ ಅದನ್ನೆಲ್ಲಾ ಮಾಡಿ ಎಂದು ನಾವು ಅವರಿಗೆ ಹೇಳಿದ್ವಾ ಎಂದರು.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಪ್ರಕರಣ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ