Advertisement

ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ :  ಸಿಎಂ ಬಿಎಸ್ ವೈ ಟ್ವೀಟ್

10:54 AM Apr 17, 2021 | Team Udayavani |

ಬೆಂಗಳೂರು : ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತವನ್ನು ಚಲಾಯಿಸಿ ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.

Advertisement

ಕೋವಿಡ್ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನ ಸಭೆ ಉಪ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಿ ಹಕ್ಕನ್ನು ನಿಭಾಯಿಸಿ ಎಂದು ಹೇಳಿದ್ದಾರೆ

ಈ ಕುರಿತು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ, ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಆತ್ಮೀಯ ಮತದಾರ ಬಂಧುಗಳೇ, ಇಂದು ತಪ್ಪದೇ ಮತ ಚಲಾಯಿಸಿ. ಪ್ರಜಾಪ್ರಭುತ್ವದ ಆಧಾರವೇ ಮತದಾನ, ಅದು ನಮ್ಮ ಹಕ್ಕೂ ಹೌದು, ಕರ್ತವ್ಯವೂ ಹೌದು. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ನಿಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿ, ಪ್ರಜಾತಂತ್ರವನ್ನು ಬಲಪಡಿಸಿ ಎಂದು ಬರೆದು ಕೊಂಡಿದ್ದಾರೆ

ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸಿಎಂ ಬಿಎಸ್ ವೈ ಜ್ವರ ಕಾಣಿಸಿಕೊಂಡಿತ್ತು. ತಪಾಸಣೆಗೆ ಒಳಪಟ್ಟಾಗ ಅವರಿಗೆ ಕೋವಿಡ್ ಧೃಡ ಪಟ್ಟಿತ್ತು. ಸದ್ಯ ಸಿಎಂ ಕ್ವಾರಂಟೈನ್ ನಲ್ಲಿದ್ದು, ಅಲ್ಲಿದ್ದುಕೊಂಡೇ ಕೋವಿಡ್ ಕುರಿತು ಸೂಕ್ತ ನಿರ್ಧಾರವನ್ನು ಕೈಗೊಳ್ಳಲು ಚುರುಕು ಗತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

 

Advertisement

Advertisement

Udayavani is now on Telegram. Click here to join our channel and stay updated with the latest news.

Next