Advertisement

ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ದೇಗುಲಕ್ಕೆ ಸಿಎಂ ಭೇಟಿ

06:47 PM Jan 19, 2021 | Team Udayavani |

ತೆಕ್ಕಟ್ಟೆ  : ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಜ.19 ರಂದು ಆಪ್ತರಾದ ಬೀಜಾಡಿ ರಾಘವೇಂದ್ರ ಉಪಾಧ್ಯಾಯ ಅವರು ಲೋಕಕಲ್ಯಾಣಾರ್ಥವಾಗಿ ಸಹಸ್ರ ನಾಳಿಕೇರ ಗಣಯಾಗದಲ್ಲಿ ಕುಟುಂಬ ಸಮೇತರಾಗಿ ಪಾಲ್ಗೊಂಡು ನಂತರ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Advertisement

ಈ ಸಂದರ್ಭದಲ್ಲಿ ದೇವಳದ ವತಿಯಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಗುರುತಿಸಿ ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ಬಿ.ವೈ.ರಾಘವೇಂದ್ರ, ಶೋಭಾ ಕರಂದ್ಲಾಜೆ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ.ಸುಕುಮಾರ ಶೆಟ್ಟಿ, ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ಜೀವರಾಜ್‌, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್‌, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್‌ ಶೆಟ್ಟಿ, ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ , ಹಿರಿಯ ಧರ್ಮದರ್ಶಿಗಳಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ , ಕೆ.ವಿಠಲ ಉಪಾಧ್ಯಾಯ ಹಾಗೂ ಅನುವಂಶಿಕ ಪರ್ಯಾಯ ಅರ್ಚಕರಾಗಿ ಕೆ.ಗಣೇಶ್‌ ಉಪಾಧ್ಯಾಯ ಮತ್ತು ಸಹೋದರ, ಮನೇಜರ್‌ ನಟೇಶ್‌ ಕಾರಂತ್‌ ತೆಕ್ಕಟ್ಟೆ ,ಅರ್ಚಕ ಮಂಡಳಿ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

ಚಿತ್ರಗಳು : ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next