ಬಾಗಲಕೋಟೆ: ರಾಜ್ಯದ ಅತೀ ದೊಡ್ಡ ಜಲಾಶಯ ಎಂದೇ ಖ್ಯಾತಿ ಪಡೆದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು.
ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಯಗಳಲ್ಲಿ ಪ್ರವಾಹದಿಂದ ಆದ ಹಾನಿಯ ಕುರಿತು ವೈಜ್ಞಾನಿಕ ಸಮೀಕ್ಷೆಯ ಬಳಿಕ ಮಧ್ಯಾಹ್ನ ಆಲಮಟ್ಟಿಗೆ ಬಂದಿಳಿದರು.
ನಂತರ ಆಲಮಟ್ಟಿ ಜಲಾಶಯಕ್ಕೆ ತೆರಳಿ, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಆಶೋಕ, ಡಿಸಿಎಂ ಗೋವಿಂದ ಕಾರಜೋಳ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಬಾಗಲಕೋಟೆ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಅವರೊಂದಿಗೆ ತುಂಬಿದ ಕೃಷ್ಣೆಯ ಮಡಿಲಿಗೆ ಬಾಗಿನ ಅರ್ಪಿಸಿದರು.
ನಂತರ ಆಲಮಟ್ಟಿಯ ಕೆ.ಬಿ.ಜಿ.ಎನ್.ಎಲ್ ಸಭಾಂಗಣದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ವಿಜಯಪುರ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳ ಸಚಿವರು, ಸಂಸತ್ ಸದಸ್ಯರು, ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಜಲ ಸಂಪನ್ಮೂಲ ಸಚಿವ ರಮೇಸ ಜಾರಕಿಹೊಳೆ, ಶಾಸಕರಾದ ವೀರಣ್ಣ ಚರಂತಿಮಠ, ಮುರುಗೇಶ ನಿರಾಣಿ, ಸೇರಿದಂತೆ ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.