Advertisement
ಹಾಸನಕ್ಕೆ ಐಐಟಿ ಮಂಜೂರಾತಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರು ಬಹಳ ವರ್ಷಗಳಿಂದ ಹೋರಾಟ ನಡೆಸಿದ್ದರು. ಆದರೆ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ. ಇದನ್ನು ಗಮನಸಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಕಳೆದ ವರ್ಷ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐಐಟಿಗಿಂತಲೂ ಮಿಗಿಲಾದ ತಾಂತ್ರಿಕ ಶಿಕ್ಷಣ ಸಂಸ್ಥೆಯನ್ನು ರಾಜ್ಯ ಸರ್ಕಾರ ದಿಂದಲೇ ಹಾಸನದಲ್ಲಿ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ.
Related Articles
Advertisement
ಅರಸೀಕೆರೆಗೂ ಬಂಪರ್ ಕೊಡುಗೆ: ಹಾಸನದ ಜಿಲ್ಲಾ ಬಂಧೀಖಾನೆ ನಿರ್ಮಾಣ ಬಜೆಟ್‌ನಲ್ಲಿ ಘೋಷಣೆ ಆಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಅರಸೀಕೆರೆಯ ಉಪ ಕಾರಾಗೃಹವನ್ನು ಹೊಸದಾಗಿ ನಿರ್ಮಾಣ ಮಾಡಲು ಮುಖ್ಯಮಂತ್ರಿಯವರು 30 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಅರಸೀಕೆರೆಯಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಯ ಪ್ರಸ್ತಾಪವನ್ನೂ ಮಾಡಿದ್ದಾರೆ. ಎತ್ತಿನಹೊಳೆ ಯೋಜನೆಯಡಿ ನೀರು ತುಂಬಿಸುವ ಅರಸೀಕೆರೆ ತಾಲೂಕಿನ ಕೆರೆಗಳ ಅಭಿವೃದ್ಧಿಗೆ 15 ಕೋಟಿ ರೂ. ಘೋಷಣೆ ಯಾಗಿದೆ.
ರಸ್ತೆಗಳ ಅಭಿವೃದ್ಧಿಗೆ 50 ಕೋಟಿ: ಎತ್ತಿನಹೊಳೆ ಯೋಜನೆಯಿಂದ ಸಕಲೇಶಪುರ, ಆಲೂರು ಮತ್ತು ಬೇಲೂರು ತಾಲೂಕಿನಲ್ಲಿ ರಸ್ತೆಗಳ ಅಭಿ ವೃದ್ಧಿಗೆ 50 ಕೋಟಿ ರೂ. ಹಾಗೂ ಸಕಲೇಶಪುರ ಪಟ್ಟಣದ ಕುಡಿಯುವ ನೀರಿನ ಯೋಜನೆಗೆ 75 ಕೋಟಿ ರೂ. ಬಜೆಟ್‌ನಲ್ಲಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ.
ಆನೆ ಹಾವಳಿ ತಡೆಗೆ ರೈಲು ಕಂಬಿ ತಡೆಗೋಡೆ: ಸಕಲೇಶಪುರ ತಾಲೂಕಿನಲ್ಲಿ ಆನೆ ಕಾರಿಡಾರ್ ನಿರ್ಮಾಣ ಘೋಷಣೆಯ ನಿರೀಕ್ಷೆಯಿತ್ತು. ಆದರೆ ಮುಖ್ಯ ಮಂತ್ರಿಯವರು ಕಾಡಾನೆಗಳ ಹಾವಳಿ ತಡೆಗೆ ಕಾಡಾನೆಗಳ ಉಪಟಳ ಇರುವ ಜಿಲ್ಲೆಗಳಲ್ಲಿ ರೈಲು ಕಂಬಿಗಳ ತಡೆಗೋಡೆ ನಿರ್ಮಾಣಕ್ಕೆ 100 ಕೋಟಿ ರೂ. ಘೋಷಣೆ ಮಾಡಿದ್ದಾರೆ. ಇದರಲ್ಲಿ ಹಾಸನ ಜಿಲ್ಲೆಯೂ ಸೇರುವ ನಿರೀಕ್ಷೆಯಿದೆ. ಜಿಲ್ಲೆಯ ಜನರು ನಿರೀಕ್ಷೆಗಳನ್ನು ಹುಸಿಯಾಗಿ ಸದೆ ದಾಖಲಾರ್ಹ ಕೊಡುಗೆಗಳನ್ನು ನೀಡಿರುವ ಮುಖ್ಯಮಂತ್ರಿಯವರು, ಏತ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಅನುದಾನ ಘೋಷಣೆ ಮಾಡಿರುವುದು ಜಿಲ್ಲೆಯ ಜನರಿಗೆ ಹರ್ಷವನ್ನುಂಟು ಮಾಡಿದೆ.
* ಎನ್. ನಂಜುಂಡೇಗೌಡ