Advertisement
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವ 115 ಮಂದಿ ಚಿಂತಕರು, ಹಗರಣ ಬಯಲಾಗಿ ಐದು ದಿನದ ಬಳಿಕವೂ ಆರೋಪಿಯನ್ನು ಸ್ವತಂತ್ರವಾಗಿರಲು ಬಿಟ್ಟಿದ್ದು ಆತನ ಚಲನವಲನದ ಮೇಲೆ ಕಣ್ಗಾವಲು ಇಡದೆ ಇದ್ದಿದ್ದು ನೋಡಿದರೆ ಈ ಸಮಾಜದಲ್ಲಿ ಸರಕಾರದ ಮೇಲೆ ವಿಶ್ವಾಸವಿಟ್ಟು ಮಹಿಳೆಯರು ಸುರಕ್ಷಿತವಾಗಿ ಇರಲು ಸಾಧ್ಯವೇ ಎಂಬ ಪ್ರಶ್ನೆ ಹುಟ್ಟು ಹಾಕಿದೆ ಎಂದು ಕುಟುಕಿದ್ದಾರೆ.
Related Articles
ಈ ಹಗರಣ ಭುಗಿಲೆದ್ದಿರುವ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ತಾತ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಅವನ ಚಿಕ್ಕಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮನ್ನು ಈ ಹಗರಣಕ್ಕೆ ತಳಕು ಹಾಕುವಂತಹ ಯಾವುದೇ ವರದಿ ಮಾಡಬಾರದೆಂದು ಸಾಮಾಜಿಕ ಮಾಧ್ಯಮಗಳು, ಮುದ್ರಣ, ಟಿವಿ, ಡಿಜಿಟಲ್ ಮಾಧ್ಯಮಗಳ ವಿರುದ್ಧ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇದು ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜೆಗಳ ಮಾಹಿತಿ ಹಕ್ಕಿನ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಎಂದು ಪತ್ರದಲ್ಲಿ ಕಿಡಿ ಕಾರಿದ್ದಾರೆ.
Advertisement
ಸಾಹಿತಿಗಳ ಪತ್ರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಅನೇಕ ವಿಷಯಗಳನ್ನು ಅವರು ಗಮನಿಸುತ್ತಾರೆ. ಸಿಎಂಗೆ ಪತ್ರ ಕೂಡ ಬರೆದಿದ್ದಾರೆ. ಪತ್ರವನ್ನು ತರಿಸಿಕೊಂಡು ನೋಡುತ್ತೇನೆ. ಅವರು ಉಲ್ಲೇಖ ಮಾಡಿದ್ದನ್ನು ಎಸ್‌ಐಟಿ ಪರಿಗಣಿಸಲಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ತನಿಖೆಯ ಎಲ್ಲ ಅಂಶಗಳನ್ನು ಬಹಿರಂಗವಾಗಿ ಹೇಳಲು ಆಗುವುದಿಲ್ಲ.– ಡಾ| ಜಿ. ಪರಮೇಶ್ವರ್, ಗೃಹ ಸಚಿವ