Advertisement

 ಸಿಎಂ ಬದಲಾವಣೆ ಊಹಾಪೋಹ  : ತೇಲ್ಕೂರ

01:51 PM May 29, 2021 | Team Udayavani |

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಊಹಾಪೋಹ ಬದಲಾವಣೆ ಬರೀ ಊಹಾಪೋಹ ಎಂದು ಬಿಜೆಪಿ ರಾಜ್ಯ ವಕ್ತಾರರಾಗಿರುವ ಸೇಡಂ ಕ್ಷೇತ್ರದ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಹೇಳಿದರು.

Advertisement

ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು, ಯಾವುದಕ್ಕೂ ಕಿವಿಗೊಡದೆ ಕ್ಷೇತ್ರದಲ್ಲಿ ಕೊರೊನಾ ವಿರುದ್ಧ ಹೋರಾಡಿ ಎಂದು ನಮ್ಮ ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿ ಹೇಳಿದ್ದಾರೆ.

ಕೊರೊನಾ ವಿರುದ್ಧ ಪ್ರಭಲ ಹೋರಾಟ ನಡೆಯುತ್ತಿರುವ ಈ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಅಪ್ರಸ್ತುತ. ಯಡಿಯೂರಪ್ಪ ಅವರೇ ನಮ್ಮ ಪ್ರಶ್ನಾತೀತ ನಾಯಕರು. ಅವರ ನೇತೃತ್ವದಲ್ಲಿ ಸರಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ತೇಲ್ಕೂರ ವಿವರಣೆ ನೀಡಿದರು.

ಸಚಿವ ಯೋಗೇಶ್ವರ ಅವರನ್ನ ಸಂಪುಟದಿಂದ ಕೈ ಬಿಡುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟದ್ದಾಗಿದೆ. ಯಾರನ್ನ ಕೈ ಬಿಡಬೇಕು. ಯಾರನ್ನ ತಗೊಬೇಕು ಎನ್ನುವುದು ಸಿಎಂ ಪರಮಾಧಿಕಾರ ಎಂದು ಹೇಳಿದರು.

ಮೋದಿ ಆಡಳಿತಕ್ಕೆ ಏಳು ವರ್ಷ: ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಮೇ 30ಕ್ಕೆ ಏಳು ವರ್ಷಗಳಾಗುತ್ತಿದೆ.
ಹೀಗಾಗಿ ಬಿಜೆಪಿ ಪಕ್ಷದಿಂದ ಸಂಭ್ರಮಾಚರಣೆ ಬದಲು ವಿವಿಧ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರಿಂದ ರಕ್ತದಾನ ಶಿಬಿರ ಹಾಗೂ ಕಷ್ಟದಲ್ಲಿ ರುವ ಜನರಿಗೆ ಊಟ ಜತೆಗೇ ಇತರ ಸೇವೆಗಳನ್ನು ಕಲ್ಪಿಸಲು ಹತ್ತಾರು ಕಾರ್ಯಗಳನ್ನು ರೂಪಿಸಲಾಗಿದೆ. ಹೂವು, ಕಲ್ಲಂಗಡಿ ಸೇರಿ ಇತರ ತೊಟಗಾರಿಕಾ ಬೆಳೆಗಳಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆ ಯಾವುದೇ ಪ್ರಚಾರವಿಲ್ಲದೇ ಆರ್ಥಿಕ ಸಹಾಯ ಕಲ್ಪಿಸುವುದು ಸೇರಿದಂತೆ ಇತರ ನಿಟ್ಟಿನ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಣೆ ನೀಡಿದರು.

Advertisement

ಎಲ್ಲ ಭೂತಗಳಲ್ಲಿ ಬಿಜೆಪಿ ಕಾರ್ಯಕರ್ತರು ತಪ್ಪದೇ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದಲ್ಲದೇ ಪ್ರಮುಖವಾಗಿ ಕೊರೊನಾ ನಿಯಂತ್ರಣ ಕ್ಕೆ ಕೈ ಜೋಡಿಸುವರು ಎಂದು ತೇಲ್ಕೂರ ವಿವರಿಸಿದರು.‌ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರಾಧ್ಯಕ್ಷ ಸಿದ್ದಾಜೀ ಪಾಟೀಲ್ ಸೇರಿದಂತೆ ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next