Advertisement
ರಾಜ್ಯದ ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕೆಯನ್ನು ನಂಬಿಕೊಂಡು ಸಾಕಷ್ಟು ಜನರು ಬದುಕು ರೂಪಿಸಿಕೊಂಡಿದ್ದಾರೆ. ಆದರೆ ಆಳ ಸಮುದ್ರ ಮೀನುಗಾರಿಕೆ ಸಮರ್ಪಕವಾಗಿ ನಡೆಯುತ್ತಿಲ್ಲ. ಅದಕ್ಕೆ ಅಗತ್ಯವಾದ ಬೋಟ್ ಸೌಲಭ್ಯ ಇಲ್ಲ. ಹೀಗಾಗಿ ಪ್ರಾಯೋಗಿಕವಾಗಿ ೧೦೦ ಜನರಿಗೆ ಇಂಥ ಸುಸಜ್ಜಿತ ಬೋಟ್ ನೀಡಲು ಸರಕಾರ ನಿರ್ಧರಿಸಿದೆ ಎಂದು ಹೇಳಿದರು.
Related Articles
Advertisement
ರೈತ ಸಮುದಾಯ ಸಂತಸಪಡುವ ವಿಚಾರವೊಂದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಕಟಿಸಿದ್ದಾರೆ. ಭವಿಷ್ಯದಲ್ಲಿ ಸರಕಾರದ ವತಿಯಿಂದಲೇ ಬೀಜ ಭದ್ರತೆ ನೀತಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಘೋಷಿಸಿದ್ದಾರೆ.
ಮಾಜಿ ಸಚಿವ ರಮೇಶ್ ಕುಮಾರ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು ರೈತರ ಸಂಕಷ್ಟದ ಬಗ್ಗೆ ಸರಕಾರಕ್ಕೆ ಸಂಪೂರ್ಣ ಅರಿವಿದೆ. ಫೌಂಡೇಶನ್ ಸೀಡ್ ಹಾಗೂ ಮದರ್ ಸೀಡ್ ವಿಚಾರದಲ್ಲಿ ನೀವು ಪ್ರಸ್ತಾಪಿಸಿದ ಸಂಗತಿ ಸತ್ಯವಾಗಿದೆ. ಖಾಸಗಿ ಹಾಗೂ ಸರಕಾರಿ ಹಂತದಲ್ಲಿ ಬೀಜ ಸುಧಾರಣೆಗೆ ಸಂಬಂಧಪಟ್ಟಂತೆ ಸಾಕಷ್ಟು ಸಂಶೋಧನೆಗಳು ನಡೆಯುತ್ತಿದೆ. ಆದಾಗಿಯೂ ನಕಲಿ ಬೀಜಗಳಿಂದ ರೈತರು ಹಾನಿಗೆ ಒಳಗಾಗಿರುವ ಸಾಕಷ್ಟು ಉದಾಹರಣೆ ನಮ್ಮ ಮುಂದೆ ಇದೆ ಎಂದು ಹೇಳಿದರು.
ರೈತರಿಗೆ ಉತ್ತಮ ಗುಣಮಟ್ಟದ ಬೀಜ ದೊರೆತಾಗ ಮಾತ್ರ ಉತ್ಕ್ಋಷ್ಟ ಬೆಳೆ ಬೆಳೆಯುವುದಕ್ಕೆ ಸಾಧ್ಯ. ಈ ಹಿನ್ನಲೆಯಲ್ಲಿ ಸರಕಾರದಿಂದಲೇ ಬೀಜಭದ್ರತೆ ಒದಗಿಸುವ ಬಗ್ಗೆ ನಿರ್ಧರಿಸಲಾಗಿದೆ. ಸದ್ಯದಲ್ಲೇ ಇದರ ರೂಪಿರೇಷೆಗಳನ್ನು ಸಿದ್ದಗೊಳಿಸುತ್ತೇವೆ.ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಈ ಚಿಂತನೆ ಆರಂಭವಾಗಿದೆ ಎಂದು ಹೇಳಿದರು.