Advertisement

KSRTC ಅಧಿಕಾರಿ, ಸಿಬ್ಬಂದಿಗಳ ಒಂದು ದಿನದ ವೇತನ ಕೋವಿಡ್ ಪರಿಹಾರ ನಿಧಿಗೆ

11:57 AM May 13, 2020 | sudhir |

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಒಂದು ದಿನದ ವೇತನದ ಮೊತ್ತ 9.85 ಕೋಟಿ ರೂ.ಗಳನ್ನು ಮುಖ್ಯಮಂತ್ರಿಗಳ ‘ಕೊವಿಡ್ ಪರಿಹಾರ ನಿಧಿ’ಗೆ ದೇಣಿಗೆ ನೀಡಿದ್ದಾರೆ.

Advertisement

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ದೇಣಿಗೆ ಚೆಕ್ ಅನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸಂ.ಸವದಿ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಸಾರಿಗೆ ಇಲಾಖೆ ಪ್ರಧಾನ‌ ಕಾರ್ಯದರ್ಶಿ ಗೌರವ ಗುಪ್ತ, ಕೆ ಎಸ್‌ ಆರ್ ಟಿ ಸಿ, ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ, ಡಾ.ರಾಮ್ ನಿವಾಸ್ ಸಪೆಟ್, ನಿರ್ದೇಶಕಿ ಕವಿತಾ ಎಸ್ ಮನ್ನಿಕೇರಿ, ಹೆಚ್.ಕೆ.ರಮಾಮಣಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next