Advertisement
ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ವಸತಿ ಸಚಿವ ಜಮೀರ್ ಅಹಮ್ಮದ್, ಇಂಧನ ಸಚಿವ ಕೆ.ಜೆ.ಜಾರ್ಜ್ ಸೇರಿ ಹಲವರ ವಿರುದ್ದ ಬಿಜೆಪಿ ಕಾರ್ಯಕರ್ತ 1 ರಿಂದ 2 ನಿಮಿಷದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಟ್ಟು ಸರಕಾರದ ಘನತೆಗೆ ದಕ್ಕೆ ತಂದಿರುವ ಬಗ್ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೂರಿನ ಅನ್ವಯ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Articles
Advertisement
10 ಜಿಲ್ಲೆಗಳಲ್ಲಿ 15 ಪ್ರಕರಣ ದಾಖಲು..
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೊರಟಗೆರೆ, ಮೈಸೂರು, ಕಲಬುರ್ಗಿ, ಶಿವಮೊಗ್ಗ, ಬೆಳಗಾವಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಆರೋಪಿ ಮೊಹಿತ್ ನರಸಿಂಹಮೂರ್ತಿ ಮೇಲೆ ಭಾರತೀಯ ನಾಗರೀಕ ಸುರಕ್ಷಾ ಕಾಯ್ದೆಯಡಿ ಒಟ್ಟು 12 ಪ್ರಕರಣ ದಾಖಲಾಗಿವೆ. ಇದಲ್ಲದೇ ಉತ್ತರಕಾಂಡದ ಚಾರದಾಮ ಯಾತ್ರೆ ಮಾಡಿಸುವ ಆಮಿಷವೊಡ್ಡಿ ಕರ್ನಾಟಕದ 10 ಜನ ಭಕ್ತರಿಗೆ ಪಂಗನಾಮ ಹಾಕಿರುವ ಹಿನ್ನಲೆ 3 ಕಡೆ ಮೋಸದ ಪ್ರಕರಣಗಳು ದಾಖಲಾಗಿವೆ.
ಉತ್ತರಕಾಂಡ ರಾಜ್ಯದಲ್ಲಿ ಬಂಧನ..
ತುಮಕೂರು ಎಸ್ಪಿ ಅಶೋಕ್ ವೆಂಕಟ್ ಆದೇಶದ ಮೇಲೆ ತುಮಕೂರು ಸಿಬಿ ಬ್ರಾಂಚ್ ಸಿಪಿಐ ಅವಿನಾಶ್, ಸಿರಾ ಗ್ರಾಮಾಂತರ ಸಿಪಿಐ ರಾಘವೇಂದ್ರ, ಕೊರಟಗೆರೆ ಪಿಎಸೈ ಚೇತನಗೌಡ, ಕ್ರೈಂ ಸಿಬ್ಬಂಧಿಗಳಾದ ದೊಡ್ಡಲಿಂಗಪ್ಪ, ಸಿದ್ದರಾಮ ನೇತೃತ್ವದ 5 ಜನ ಪೊಲೀಸರ ತಂಡ 15 ಪ್ರಕರಣದ ಆರೋಪಿ ಮೋಹಿತ್ ನರಸಿಂಹಮೂರ್ತಿಯನ್ನು ಉತ್ತರಕಾಂಡ ರಾಜ್ಯದ ರುದ್ರಪ್ರಯಾಗ ಜಿಲ್ಲೆ ಚಮೋಲಿ ತಾಲೂಕಿನ ಉಕ್ಕಿಮಠದ ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆಯೇ ಬಂಧಿಸಿದ್ದಾರೆ.
ತುಮಕೂರು ಎಸ್ಪಿ ಅಶೋಕ್ ವೆಂಕಟ್, ಎಎಸ್ಪಿ ಮರೀಯಪ್ಪ, ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಕೊರಟಗೆರೆಗೆ ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸಿದ್ದಾರೆ. ಕೊರಟಗೆರೆ ಸಿಪಿಐ ಅನಿಲ್, ಪಿಎಸೈ ಚೇತನ ಗೌಡ ನೇತೃತ್ವದ ತಂಡ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಆರೋಪಿ ಮೋಹಿತ್ ನರಸಿಂಹಮೂರ್ತಿ ವಿರುದ್ದ ಪ್ರಕರಣ ದಾಖಲಾಗಿದೆ.
ಸಿಎಂ, ಡಿಸಿಎಂ, ಗೃಹಸಚಿವರು ಸೇರಿ 15ಕ್ಕೂ ಅಧಿಕ ಸಚಿವರ ಬಗ್ಗೆ ಮೊಹಿತ್ ನರಸಿಂಹಮೂರ್ತಿ ಎಂಬಾತ ವೈಯಕ್ತಿಕ ತೇಜೋವಧೆಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಉತ್ತರಕಾಂಡಕ್ಕೆ ಪರಾರಿಯಾಗಿದ್ದಾನೆ. ಸರಕಾರದ ಘನತೆಗೆ ದಕ್ಕೆ ಮತ್ತು ಅವಾಚ್ಯ ಶಬ್ದ ಬಳಕೆ ಮಾಡಿದ್ದು ತಪ್ಪು. ನಾನು ದೂರು ನೀಡಿದ ತಕ್ಷಣವೇ ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. -ಅರಕೆರೆ ಶಂಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಕೊರಟಗೆರೆ