Advertisement
ಮಾಜಿ ಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದ ಪಾದಯಾತ್ರೆ ಸೋಮವಾರ ದಾಸರಹಳ್ಳಿ ಮತ್ತು ಯಲಹಂಕ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಿತು. ದಾಸರಹಳ್ಳಿ ಕ್ಷೇತ್ರದಲ್ಲಿ ನಡೆದ ಪಾದಯಾತ್ರೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳಿಗೆ ಯಾವ ರೀತಿ ಕಿರುಕುಳ ನೀಡುತ್ತಿದೆ? ಇದರಿಂದ ಕಾನೂನು ಸುವ್ಯವಸ್ಥೆ ಹೇಗೆ ಹದಗೆಟ್ಟಿದೆ ಎಂಬುದಕ್ಕೆ ಐಪಿಎಸ್ ಅಧಿಕಾರಿಗಳ ಸಂಘ ಸರ್ಕಾರಕ್ಕೆ ಬರೆದಿರುವ ಪತ್ರ ಸಾಕ್ಷಿ ಎಂಧರು.
Related Articles
Advertisement
ಆಸ್ಪತ್ರೆಯಲ್ಲಿದ್ದ ಗಾಯಾಳುವಿನ ವೈದ್ಯಕೀಯ ದಾಖಲೆಗಳು ಆರೋಪಿ ಕೈಯ್ಯಲ್ಲಿವೆ ಎಂದರೆ, ಸಾಕ್ಷ್ಯ ನಾಶ ಮಾಡುವಲ್ಲಿ ಸರ್ಕಾರದ ಪಾತ್ರವಿರುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದರು. ದಾಸರಹಳ್ಳಿಯ ಮಾರಮ್ಮ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆಯಲ್ಲಿ ಶಾಸಕ ಮುನಿರಾಜು ಸೇರಿದಂತೆ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.
ಸಂಜೆ ಯಲಹಂಕದಲ್ಲಿ ಪಾದಯಾತ್ರೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಆರ್.ಅಶೋಕ್, ಶಾಸಕ ಎಸ್.ಆರ್.ವಿಶ್ವನಾಥ್ ಮತ್ತಿತರರು ಡೊಳ್ಳು ಬಾರಿಸುತ್ತಾ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.
ಖೇಣಿಯಿಂದ ಸಿಎಂಗೆ ಲಂಚ: ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿಯಿಂದ ಲಂಚ ಪಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂಪನಿ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಬೆಂಗಳೂರು ರಕ್ಷಿಸಿ ಪಾದಯಾತ್ರೆ ವೇಳೆ ಯಲಹಂಕದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, ಅಶೋಕ್ ಖೇಣಿಯನ್ನು ಕಾಂಗ್ರೆಸ್ ಸೇರಿಸಿಕೊಂಡಿರುವುದನ್ನು ಮಲ್ಲಿಕಾರ್ಜುನ ಖರ್ಗೆಯವರೇ ಪ್ರಶ್ನೆ ಮಾಡಿದ್ದಾರೆ. ಇದರಿಂದ ಪಕ್ಷದ ಅಭಿಪ್ರಾಯ ಪಡೆಯದೆ ಖೇಣಿ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿರುವುದು ಸ್ಪಷ್ಟವಾಗಿದ್ದು, ಮುಖ್ಯಮಂತ್ರಿ ಮತ್ತು ಅವರ ಕಂಪನಿ ಖೇಣಿಯಿಂದ ಲಂಚ ಪಡೆದು ಈ ಕೆಲಸ ಮಾಡಿದೆ ಎಂದರು.
ತಮ್ಮ ಅಧಿಕಾರಾವಧಿ ಕೊನೆಗೊಳ್ಳುತ್ತಿರುವುದರಿಂದ ಎಷ್ಟು ಸಾಧ್ಯವೋ ಅಷ್ಟು ಲೂಟಿ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದಂತಿದೆ. ಅದಕ್ಕಾಗಿ ಬಡವರ ಭೂಮಿ ಲೂಟಿ ಮಾಡಿದ ಅಶೋಕ್ ಖೇಣಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿದ್ದಾರೆ ಎಂದು ಕಿಡಿ ಕಾರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನವಿರೋಧಿ ಧೋರಣೆ, ಕೆಟ್ಟ ಆಡಳಿತದಿಂದ ಕಾಂಗ್ರೆಸಿಗರೇ ರೋಸಿ ಹೋಗಿದ್ದು, ಮಾ. 23ರಂದು ರಾಜ್ಯಸಭೆ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್‌ನ ಅನೇಕ ಶಾಸಕರು, ನಾಯಕರು ಬಿಜೆಪಿಗೆ ಬರಲಿ¨ªಾರೆ ಎಂದು ಯಡಿಯೂರಪ್ಪ ಹೇಳಿದರು.