Advertisement

ಆಲಮಟ್ಟಿ ಶಾಸ್ತ್ರೀ ಜಲಾಶಯದ ಪ್ರವಾಹ ನಿರ್ವಹಣೆಗೆ ಮಹಾ ಸಿ.ಎಂ. ಶ್ಲಾಘನೆ : ಕೋಳಕೂರ

01:33 PM Aug 18, 2022 | Team Udayavani |

ವಿಜಯಪುರ: ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಸಾರಥ್ಯದಲ್ಲಿ ರಾಜ್ಯದಲ್ಲಿ ಆಲಮಟ್ಟಿ ಶಾಸ್ತ್ರೀ ಜಲಾಶಯದಲ್ಲಿ ಅತ್ಯುತ್ತಮವಾಗಿ ನೀರಿನ ನಿರ್ವಹಣೆ ಮಾಡಲಾಗಿದೆ. ನೆರೆಯ ಮಹಾರಾಷ್ಟ್ರ ಮುಖ್ಯಮಂತ್ರಿಗಳೇ ಶ್ಲಾಘಿಸಿರುವುದೇ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಮುಖಂಡರಾದ ಜಿ.ಪಂ. ಮಾಜಿ ಅಧ್ಯಕ್ಷ ಉಮೇಶ ಕೋಳಕೂರ ಸಂತಸ ವ್ಯಕ್ತಪಡಿಸಿದರು.

Advertisement

ಗುರುವಾರ ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜಲಸಂಪನ್ಮೂಲ ಸಚಿವ ಕಾರಜೋಳ ಹಾಗೂ ಇಲಾಖೆಯ ಅಧಿಕಾರಿಗಳು ಮಳೆಗಾಲದಲ್ಲಿ ಜಲಾಶಯಕ್ಕೆ ಹರಿದು ಬರುವ ಬೃಹತ್ ಪ್ರಮಾಣದ ನೀರಿನ ನಿರ್ವಹಣೆ ಮಾಡಿದ್ದರಿಂದ ಕೃಷ್ಣ, ಭೀಮಾ ನದಿಗಳಲ್ಲಿ ಸಂಭವನೀಯ ಪ್ರವಾಹ ದುರಂತ ತಪ್ಪಿಸಲು ಸಾಧ್ಯವಾಗಿದೆ ಎಂದರು.

ಈವರೆಗೆ ಕೃಷ್ಣಾ ನದಿ ನೀರಿನ ವಿಷಯದಲ್ಲಿ ಮಹಾರಾಷ್ಟ್ರ ಸರ್ಕಾರ ಕರ್ನಾಟಕ ರಾಜ್ಯದೊಂದಿಗೆ ತಗಾದೆ ತೆಗೆದಿರುವುದೇ ಹೆಚ್ಚು. ಆದರೆ ಇದೀಗ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರೇ ಕರ್ನಾಟಕ ರಾಜ್ಯದ ಅಧಿಕಾರಿಗಳನ್ನು ಶ್ಲಾಘಿಸಿರುವುದು ಹೆಮ್ಮೆಯ ಸಂಗತಿ. ಇದಕ್ಕಾಗಿ ಸಚಿವ ಗೋವಿಂದ ಕಾರಜೋಳ ಅವರನ್ನು  ಹೇಳಿದರು.

ಮಹಾರಾಷ್ಟ್ರ ರಾಜ್ಯದಲ್ಲಿ ಸುರಿಯುವ ಮಳೆ, ಜಲಾಶಯಗಳ ನೀರಿನ ಒಳ-ಹೊರ ಹರಿವಿನ ಪ್ರಮಾಣ ಸೇರಿದಂತೆ ಕರ್ನಾಟಕ ರಾಜ್ಯದ ಅಧಿಕಾರಿಗಳು ಮಹಾರಾಷ್ಟ್ರ ರಾಜ್ಯದ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ, ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದ್ದೇ ಪ್ರವಾಹ ಪರಿಸ್ಥಿತಿ ಸಂಭವಿಸದಂತೆ ಮಾಡಿದ್ದೇ ಶ್ಲಾಘನೆಗೆ ಕಾರಣವಾಗಿದೆ ಎಂದರು.

ಡೋಣಿ ನದಿ ಪ್ರವಾಹ ನಿರ್ವಹಣೆ ವಿಷಯದಲ್ಲಿ ಜಲಸಂಪನ್ಮೂಲ ಹಿಂದಿನ ಸಚಿವರು‌ ನಿರ್ಲಕ್ಷ್ಯ ತೋರಿದ್ದೇ ಕಾರಣ. ಇದೀಗ ಆ ಮಾದರಿ, ಈ ಮಾದರಿ ಅಂತೆಲ್ಲ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಕೋಶಿ ಸೇರಿದಂತೆ ಇತರೆ ಯಾವ ಮಾದರಿಗಿಂತ ಸ್ಥಳೀಯ ರೈತರೇ ಬಹುದೊಡ್ಡ ಅನುಭವಿಗಳಿದ್ದಾರೆ. ಅವರ ಯೋಜನೆಗಳನ್ನೇ ಅನುಷ್ಠಾನಕ್ಕೆ ತಂದರೆ ಸಾಕಿದೆ ಎಂದರು.

Advertisement

ಇದನ್ನೂ ಓದಿ: ನಕಲಿ ಸುದ್ದಿ ಹರಡುತ್ತಿದ್ದ ಭಾರತದ 7 ಮತ್ತು ಪಾಕ್ ನ 1 ಯೂಟ್ಯೂಬ್ ಚಾನೆಲ್ ನಿಷೇಧಿಸಿದ ಕೇಂದ್ರ

ಈ ವಿಷಯದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಡೋಣಿನದಿ ಹೂಳು ಎತ್ತುವುದು ಸೇರಿದಂತೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳ ಜೊತೆ ಮಾಹಿತಿ ಸಂಗ್ರಹಿಸುವ ಕೆಲಸ ನಡೆಸಿದ್ದಾರೆ ಎಂದರು.

ವಿಜಯಪುರ ಮಹಾನಗರ ಪಾಲಿಕೆ ಮಾಜಿ ಸದಸ್ಯ ರವೀಂದ್ರ ಲೋಣಿ ಮಾತನಾಡಿ, ಈ ಹಿಂದಿನ ಸಚಿವರು 2017 ರಲ್ಲಿ ಆಲಮಟ್ಟಿ ಶಾಸ್ತ್ರೀ ಜಲಾಶಯದಲ್ಲಿ ಅಸಮರ್ಪಕ ನೀರಿನ ನಿರ್ವಹಣೆ ಮಾಡಿದ್ದರ ಪರಿಣಾಮ ಜಲಾಶಯದ ಡೆಡ್ ಸ್ಟೋರೇಜ್ ನೀರಿನ ಬಳಕೆ ಮಾಡುವ ದುಸ್ಥಿತಿ ನಿರ್ಮಾಣ ಆಗಿತ್ತು. ಸಚಿವ ಗೋವಿಂದ ಕಾರಜೋಳ ಅವರ ಸಮರ್ಥ ನೀರಿನ ನಿರ್ವಹಣೆಯೇ ಇಂದು ಅನ್ಯ ರಾಜ್ಯದ ಮುಖ್ಯಮಂತ್ರಿ ಹೊಗಳುವ ಸುಸ್ಥಿತಿ ನಿರ್ಮಾಣವಾಗಿದೆ ಎಂದರು. ಈ ವೇಳೆ ಜಿ.ಪಂ. ಮಾಜಿ ಸದಸ್ಯರಾದ ಮಲ್ಲಿಕಾರ್ಜುನ ಕನ್ನೂರು, ನವೀನ ಅರಕೇರಿ, ಭೀಮಾಶಂಕರ ಬಿರಾದಾರ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next