ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಶನಿವಾರ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಸ್.ವಿ.ಪಿ ವೃತ್ತದಲ್ಲಿ ಹೈದ್ರಾಬಾದ ಕರ್ನಾಟಕ ವಿಮೋಚನೆ ರೂವಾರಿ ಸರ್ದಾರ ವಲ್ಲಭಭಾಯ್ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಮುಖ್ಯಮಂತ್ರಿಗಳಿಗೆ ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಇಲಾಖೆ ರಾಜ್ಯ ಸಚಿವ ಭಗವಂತ ಖೂಬಾ, ಗೃಹ ಸಚಿವ ಆರಗ ಜ್ಞಾನೇಂದ್ರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|ಮುರುಗೇಶ ಆರ್. ನಿರಾಣಿ, ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯೀಕ ಸಚಿವ ಮುನಿರತ್ನ ಸಾಥ್ ನೀಡಿದರು.
ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಸದಸ್ಯ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಶಾಸಕರಾದ ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಡಾ|ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ ಜಿ. ನಮೋಶಿ, ಡಾ|ಬಿ.ಜಿ.ಪಾಟೀಲ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ (ಚಂದು ಪಾಟೀಲ), ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮಾಜಿ ಎಂಎಲ್‌ಸಿ ಅಮರನಾಥ ಪಾಟೀಲ, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಡಿಸಿಪಿ ಅಡ್ಮೂರು ಶ್ರೀನಿವಾಸಲು, ಹೈದ್ರಾಬಾದ ಕರ್ನಾಟಕ ಪ್ರದೇಶ ಇತಿಹಾಸ ರಚನಾ ಸಮಿತಿಯ ಸದಸ್ಯ ಕಾರ್ಯದರ್ಶಿ ಲಕ್ಷ್ಮಣ ದಸ್ತಿ ಹಾಗೂ ಇನ್ನಿತರ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದರು.