ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರವು ಕೋಮು ದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಲಾಗಿದೆ.
ಮಂಗಳೂರು ಬಾಳದ ಮೊಹಮ್ಮದ್ ಫಾಜಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್, ದೀಪಕ್ ರಾವ್, ಬೆಳ್ಳಾರೆಯ ಮಸೂದ್ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗಿದೆ.
ಇದನ್ನೂ ಓದಿ:Adipurush: ಮೊದಲ ದಿನವೇ ದಾಖಲೆಯ ಕಲೆಕ್ಷನ್‌ನತ್ತ ʼಆದಿಪುರುಷ್ʼ: 1st Day ಗಳಿಕೆ ಎಷ್ಟು?
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ತತ್ವದೊಂದಿಗೆ ಮುನ್ನೆಡೆಯುವ ನಮ್ಮ ಸರ್ಕಾರದಲ್ಲಿ ತಾರತಮ್ಯಕ್ಕೆ ಆಸ್ಪದವಿಲ್ಲ.ಬಿಜೆಪಿ ಅವಧಿಯಲ್ಲಿ ಕೋಮು ಕಿಚ್ಚಿಗೆ ಬಲಿಯಾದ ಮಸೂದ್, ಫಾಜಿಲ್, ಜಲೀಲ್ ಹಾಗೂ ದೀಪಕ್ ರಾವ್ ಅವರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಗಳನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ಇನ್ಮುಂದೆ ಕೋಮು ಕಲಹಕ್ಕೆ, ಪ್ರಚೋದನೆಗೆ ಯಾವುದೇ ಕಾರಣಕ್ಕೂ ಆಸ್ಪದ ನೀಡುವುದಿಲ್ಲ ಎಂದಿದೆ.