ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ನಡೆದರೂ ಕಾಂಗ್ರೆಸ್ ತಟಸ್ಥವಾಗಿರಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ಕಾರಣ ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಶೇಖರ್, ಮುಖ್ಯಮಂತ್ರಿ ಅವರು ನಮ್ಮನ್ನು ಮಗನ ಪರ ಪ್ರಚಾರಕ್ಕೆ ಕರೆಯಲಿಲ್ಲ. ಸ್ವಾಭಿಮಾನಿಗಳಾದ ನಾವು ಪ್ರಚಾರಕ್ಕೆ ಹೋಗದೆ ತಟಸ್ಥವಾಗಿ ಉಳಿದೆವು ಎಂದರು.
ಹಾಸನದಲ್ಲಿ, ತುಮಕೂರಿನಲ್ಲಿ ಜೆಡಿಎಸ್ ಅಭ್ಯರ್ಥಿಗಳಾದ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ರೇವಣ್ಣ ಅವರು ಕಾಂಗ್ರೆಸ್ ನಾಯಕರ ಮನೆಗಳಿಗೆ ತೆರಳಿ ತಮ್ಮ ಪರ ಪ್ರಚಾರ ಮಾಡುವಂತೆ ಕೇಳಿಕೊಂಡಿದ್ದರಲ್ಲ ಎಂದರು.
ಕುಮಾರಸ್ವಾಮಿ ಅವರು ನಮ್ಮೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಿದ್ದರೆ , ಸಂಸದ ಶಿವರಾಮೇಗೌಡ ಅವರು ಗೆದ್ದ ಎರಡು ಪಟ್ಟು ಹೆಚ್ಚು ಅಂತರದಿಂದ ಗೆಲ್ಲಿಸಿ ಕೊಡುತ್ತಿದ್ದೆವು ಎಂದರು.
10 ಕೋಟಿ ಪಡೆದಾಗಿದೆ
ಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣ ಗೌಡರಿಗೆ ಬಿಜೆಪಿಯವರು 10 ಕೋಟಿ ರೂಪಾಯಿ ನೀಡಿದ್ದಾರೆ. ಮೇ 23 ರನಂತರ ನಾರಾಯಣ ಗೌಡ ಮುಂಬಯಿಗೆ ಹಾರುತ್ತಾರೆ ಎಂದು ಗಂಭೀರ ಆರೋಪ ಮಾಡಿದರು.