Advertisement
ಆಪರೇಷನ್ ಕಮಲ ಭೀತಿ, ದಂಗೆ ಹೇಳಿಕೆಗಳ ಬಳಿಕ ದಿಢೀರ್ ಆಗಿ ಸಿಎಂ ಎಚ್ಡಿಕೆ ಅವರು ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ್ದಾರೆ. ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಭಾಗಿಯಾಗಿದ್ದಾರೆ.
ದಂಗೆ ಏಳುವ ಹೇಳಿಕೆ ಕುರಿತು ಸಿದ್ದರಾಮಯ್ಯ ಅವರು ಸಿಎಂ ಎಚ್ಡಿಕೆ ಬಳಿ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.