ರಾಯಚೂರು: ಜಲಧಾರೆ ಯೋಜನೆಯ ಮೂಲಕ ಸಮಗ್ರ ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಪ್ರಸ್ತಾವನೆ ಸರಕಾರದ ಮುಂದಿದ್ದು ಅದಕ್ಕೆ ಶೀಘ್ರ ಅನುಮೋದನೆ ನೀಡುವುದರ ಮೂಲಕ ಇಡೀ ಜಿಲ್ಲೆಗೆ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಹಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಮಾನ್ವಿ ತಾಲ್ಲೂಕಿನ ಕರೆಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯಕ್ಕಾಗಿ ಆಗಮಿಸಿದ ಮುಖ್ಯಮಂತ್ರಿ ಎಚ್‌ಡಿಕೆ ಅವರು ರಾಯಚೂರು ಅತಿಥಿಗೃಹದಲ್ಲಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಿ, ಎಲ್ಲಿಯೂ ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ರಾಯಚೂರು ಜಿಲ್ಲೆಯ ಅಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿ ಮೀಸಲಿಡುವುದಾಗಿ ತಿಳಿಸಿದರು.
ಸರ್ಕಾರಿ ಬಸ್‌ನಲ್ಲಿ ಪ್ರಯಾಣಸಿದ ಸಿಎಂ ಮಾರ್ಗ ಮಧ್ಯದಲ್ಲಿ ಜನರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಸಚಿವರಾದ ಸಾ.ರಾ.ಮಹೇಶ್, ಶಿವಶಂಕರ ರೆಡ್ಡಿ, ವೆಂಕಟರಾವ್ ನಾಡಗೌಡ, ಶಾಸಕ ರಾಜಾವೆಂಕಟಪ್ಪ ನಾಯಕ್ , ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಎಚ್.ಬಿ.ದಿನೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.