ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ. ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರನ್ನು ಬುಧವಾರ ಬೆಂಗಳೂರಿನಲ್ಲಿ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರೇ ಮತ್ತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಎಚ್‌ಡಿಕೆ ಶಾಸ ಕಾಂಗ ಪಕ್ಷದ ನಾಯಕ ಜೆಡಿಎಸ್‌ನ ಶಾಸಕಾಂಗ ಸಭೆಯೂ ನಡೆದಿದ್ದು, ಅದರ ನಾಯಕರಾಗಿ ಮತ್ತೂಮ್ಮೆ ಅವಿರೋಧವಾಗಿ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ.
ವಿಧಾನಮಂಡಲದಲ್ಲಿ ಜನಪರವಾಗಿ, ವಿಷಯಾಧಾರಿತವಾಗಿ ಹೋರಾಟ ಮಾಡುವ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಕಳೆದ ವಿಧಾನಸಭೆಯಲ್ಲೂ ಕುಮಾರಸ್ವಾಮಿಯವರೇ ಜೆಡಿಎಸ್ ಶಾಸಕಾಂಗ ನಾಯಕರಾಗಿದ್ದರು.